ಏರಿದ ತಾಪಮಾನ: ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟ ಬೇಡವೆಂದ ಪೋಷಕರು

ಸುಡು ಬಿಸಿಲಿನ ಬೇಗೆಗೆ ಬಳಲಿ ಬೆಂಡಾಗಿರುವ ಹಲವು ವಿದ್ಯಾರ್ಥಿಗಳು ಶಾಲೆಗಳಲ್ಲಿ ನೀಡುವ ಮಧ್ಯಾಹ್ನದ ಬಿಸಿಯೂಟ ಪಡೆಯಲು...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು:  ಸುಡು ಬಿಸಿಲಿನ ಬೇಗೆಗೆ ಬಳಲಿ ಬೆಂಡಾಗಿರುವ ಹಲವು ವಿದ್ಯಾರ್ಥಿಗಳು ಶಾಲೆಗಳಲ್ಲಿ ನೀಡುವ ಮಧ್ಯಾಹ್ನದ ಬಿಸಿಯೂಟ ಪಡೆಯಲು ನಿರಾಕರಿಸಿದ್ದಾರೆ. 
ಉತ್ತರ ಕರ್ನಾಟಕದ ಹಲವು ಬರಪೀಡಿತ ತಾಲೂಕುಗಳಲ್ಲಿ ಬೇಸಿಗೆ ರಜೆಯಲ್ಲೂ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡಲು ಸರ್ಕಾರ ಸೂಚಿಸಿದೆ. ಆದರೆ ಬಿಸಿಲ ಬೇಗೆಯಿಂದಾಗಿ ಅದರಲ್ಲೂ ಮಧ್ಯಾಹ್ನದ ವೇಳೆ ಅಧಿಕ ತಾಪಮಾನವಿರುತ್ತದೆ, ಶಾಲೆ ಬಹಳ ದೂರ ಇರುವ ಕಾರಣ ಮಕ್ಕಳು ಹೋಗಿ ಬರಲು ತ್ರಾಸವಾಗುತ್ತದೆ, ಹೀಗಾಗಿ ತಮ್ಮ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಬೇಡ ಎಂದು ಪೋಷಕರು ಶಾಲೆ ಸಿಬ್ಬಂದಿಗೆ ತಿಳಿಸಿದ್ದಾರೆ.
ಮಕ್ಕಳನ್ನು ಶಾಲೆಗೆ ಕಳುಹಿಸಿ ಎಂದು ಪೋಷಕರ ಬಳಿ ನಾವು ಕೇಳುತ್ತಿದ್ದೇವೆ, ಆದರೆ ಹಲವು ಪೋಷಕರು ತಮ್ಮ ಮಕ್ಕಳನ್ನು ಕಳುಹಿಸಲು ನಿರಾಕರಿಸುತ್ತಿದ್ದಾರೆ ಎಂದು ಶಾಲಾಭಿವೃದ್ಧಿ ಸಮಿತಿ ಸದಸ್ಯರು ಹೇಳಿದ್ದಾರೆ.
ಇದು ಕೇವಲ ಜೇವರ್ಗಿ ತಾಲೂಕಿನ ಪರಿಸ್ಥಿತಿ ಮಾತ್ರವಲ್ಲ,  ಕೋಲಾರ,ಚಿಕ್ಕಬಳ್ಳಾಪುರ ಜಿಲ್ಲೆಗಳ ಶಾಲಾ ಪರಿಸ್ಥಿತಿಯೀ ಹೀಗೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ವರ್ಷ ಕೂಡ ಹೀಗೆ ಆಗಿತ್ತು ಎಂದು ಹೇಳಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com