ಅಂಗನವಾಡಿ ಒಕ್ಕೂಟದ ಜೊತೆ ಸಿಎಂ ಸಿದ್ದರಾಮಯ್ಯ ಸಭೆ; ವೇತನ ಹೆಚ್ಚಳಕ್ಕೆ ಒಪ್ಪಿಗೆ

ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು ತಿಂಗಳಿಗೆ...
ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು  ಅಂಗನವಾಡಿ ಕಾರ್ಯಕರ್ತೆಯರ ಒಕ್ಕೂಟದ ಸದಸ್ಯರು ಅಭಿನಂದಿಸಿದ ಕ್ಷಣ.
ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಂಗನವಾಡಿ ಕಾರ್ಯಕರ್ತೆಯರ ಒಕ್ಕೂಟದ ಸದಸ್ಯರು ಅಭಿನಂದಿಸಿದ ಕ್ಷಣ.
Updated on: 
ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು ತಿಂಗಳಿಗೆ 2,000 ರೂಪಾಯಿ ಹಾಗೂ ಸಹಾಯಕಿಯರಿಗೆ 1,000 ರೂಪಾಯಿಗಳಷ್ಟು ರಾಜ್ಯ ಸರ್ಕಾರ ಹೆಚ್ಚಳ ಮಾಡಿದೆ.
ಈ ಕುರಿತು ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಗನವಾಡಿ ಕಾರ್ಯಕರ್ತೆಯರ ಸಂಘಟನೆಗಳ ಮುಖಂಡರೊಂದಿಗೆ ನಡೆಸಿದ ಮಾತುಕತೆ ಫಲಪ್ರದವಾಗಿದೆ.  
ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ರಾಜ್ಯ ಸರ್ಕಾರ ಏರಿಕೆ ಮಾಡಿದಷ್ಟೇ ವೇತನವನ್ನು ಕೇಂದ್ರ ಸರ್ಕಾರ ಕೂಡ ಮಾಡಬೇಕೆಂದು ಮುಖ್ಯಮಂತ್ರಿ ಇದೇ ಸಂದರ್ಭದಲ್ಲಿ ಪ್ರಧಾನಿಯವರನ್ನು ಒತ್ತಾಯಿಸಿದ್ದಾರೆ. ಈ ಕುರಿತು ಪ್ರಧಾನ ಮಂತ್ರಿಗೆ ಪತ್ರ ಬರೆಯುವುದಾಗಿ ಕೂಡ ತಿಳಿಸಿದ್ದಾರೆ.
ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳಿಗೆ ಸರ್ಕಾರದ ಸಕಾರಾತ್ಮಕ ಸ್ಪಂದನದಿಂದ ಖುಷಿಗೊಂಡ ಅಂಗನವಾಡಿ ಕಾರ್ಯಕರ್ತೆಯರ ಒಕ್ಕೂಟದ ಸದಸ್ಯರು ಮುಖ್ಯಮಂತ್ರಿಯನ್ನು ಅಭಿನಂದಿಸಿದರು.
ಈ ಮೊದಲು ಅಂಗನವಾಡಿ ಕಾರ್ಯಕರ್ತೆಯರಿಗೆ ತಿಂಗಳಿಗೆ 6,000 ರೂಪಾಯಿ ಗೌರವಧನ ಸಿಗುತ್ತಿತ್ತು. ಅದನ್ನೀಗ 8,000ಕ್ಕೆ ಏರಿಕೆ ಮಾಡಲಾಗಿದೆ.
ಅಂಗನವಾಡಿ ಕಾರ್ಯಕರ್ತೆಯರ ಗೌರವಧನದಲ್ಲಿ 2016-17ಕ್ಕೆ ಹೋಲಿಸಿದರೆ ತಿಂಗಳಿಗೆ ರೂ.2000 ಸಾವಿರ, ಸಹಾಯಕಿಯರಿಗೆ ರೂ. 1000 ಏರಿಕೆ ಮಾಡಲಾಗುವುದು ಎಂದು ಸಭೆಯ ನಂತರ ಮುಖ್ಯಮಂತ್ರಿ ಮಾಧ್ಯಮಗಳಿಗೆ ತಿಳಿಸಿದರು.
ತಮ್ಮ ವೇತನ ಹೆಚ್ಚಳಕ್ಕೆ ಆಗ್ರಹಿಸಿ ರಾಜ್ಯದ ಮೂಲೆ ಮೂಲೆಗಳಿಂದ ಬಂದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಕಳೆದ ತಿಂಗಳು ಬೆಂಗಳೂರಿನಲ್ಲಿ ಬೃಹತ್ ಮಟ್ಟದ ಪ್ರತಿಭಟನೆ ನಡೆಸಿದ್ದನ್ನು ಇಲ್ಲಿ ಸ್ಮರಿಸಬಹುದು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com