ದಲಿತ ನಾಯಕ ಗುರುಪ್ರಸಾದ್ ಕೆರೆಗೋಡುಗೆ ಅಂಬೇಡ್ಕರ್ ಪ್ರಶಸ್ತಿ

2017ನೇ ಸಾಲಿನ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗೆ ದಲಿತ ಸಂಘರ್ಷ ಸಮಿತಿ...
ರಾಷ್ಟ್ರಪತಿ ಪ್ರಣಬ್ ಮುಖರ್ಜಿ
ರಾಷ್ಟ್ರಪತಿ ಪ್ರಣಬ್ ಮುಖರ್ಜಿ
ಬೆಂಗಳೂರು: 2017ನೇ ಸಾಲಿನ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗೆ ದಲಿತ ಸಂಘರ್ಷ ಸಮಿತಿ ಸದಸ್ಯ ಗುರುಪ್ರಸಾದ್ ಕೆರೆಗೋಡು ಆಯ್ಕೆಯಾಗಿದ್ದಾರೆ. ನಾಳೆ ನಡೆಯಲಿರುವ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುಪ್ರಸಾದ್ ಅವರಿಗೆ 5  ಲಕ್ಷ ರೂಪಾಯಿ ನಗದು ಬಹುಮಾನ ನೀಡಲಿದ್ದಾರೆ.
ದಲಿತರ ಉದ್ಧಾರಕ್ಕಾಗಿ ಮತ್ತು ಅಂಬೇಡ್ಕರ್ ಅವರ ತತ್ವಗಳನ್ನು ಸಮಾಜದಲ್ಲಿ ಪ್ರಚುರಪಡಿಸುವಲ್ಲಿ ಕೆಲಸ ಮಾಡಿದ ಗುರುಪ್ರಸಾದ್ ಅವರನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಹೆಚ್. ಆಂಜನೇಯ ತಿಳಿಸಿದ್ದಾರೆ.
ಈ ವರ್ಷ ಎಸ್ಸಿ, ಎಸ್ಟಿ ಸಮುದಾಯಕ್ಕಾಗಿ ಇರುವ ಅಂಬೇಡ್ಕರ್ ಆವಾಸ್ ವಸತಿ ಯೋಜನೆ ಆರಂಭವಾಗಲಿದೆ. ಗ್ರಾಮೀಣ  ಭಾಗದ ಬಡ ದಲಿತರಿಗೆ  ಸೈಟು ಮತ್ತು 1.75 ಲಕ್ಷ ರೂಪಾಯಿ ಆರ್ಥಿಕ ನೆರವು, ನಗರ ಪ್ರದೇಶಗಳಲ್ಲಿರುವ ದಲಿತರಿಗೆ ಪಕ್ಕಾ ಮನೆ ಕಟ್ಟಲು 2 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡಲಾಗುತ್ತದೆ. ಸರ್ಕಾರಿ ಭೂಮಿಯಲ್ಲಿ ಗುಡಿಸಲುಗಳಲ್ಲಿ ವಾಸಿಸುತ್ತಿರುವವರು ಉಚಿತ ವಸತಿಗೆ ಈ ಯೋಜನೆಯಡಿ ಅರ್ಜಿ ಸಲ್ಲಿಸಬಹುದು ಎಂದು ಆಂಜನೇಯ ತಿಳಿಸಿದರು.
6ನೇ ತರಗತಿಯಿಂದ 10ನೇ ತರಗತಿವರೆಗಿನ ಮಕ್ಕಳಿಗೆ ಈ ವರ್ಷದಿಂದ 125 ಅಂಬೇಡ್ಕರ್ ವಸತಿ ಶಾಲೆಗಳನ್ನು ಆರಂಭಿಸಲಾಗುವುದು ಎಂದು ಸಹ ಸಚಿವರು ತಿಳಿಸಿದರು.
ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ನಾಳೆ ಬೆಂಗಳೂರಿನಲ್ಲಿ ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಮಿಕ್ಸ್ ಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com