ಉಪ ಚುನಾವಣಾ ಫಲಿತಾಂಶ ಮುಂದಿನ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಲ್ಲ: ಬಿಎಸ್ ಯಡಿಯೂರಪ್ಪ

ನಂಜನಗೂಡು-ಗುಂಡ್ಲುಪೇಟೆ ಉಪ ಚುನಾವಣೆ ಮುಂದಿನ ವಿಧಾನಸಭಾ ಚುನಾವಣೆಗೆ ಯಾವುದೇ ರೀತಿಯಲ್ಲೂ ದಿಕ್ಸೂಚಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ನಂಜನಗೂಡು-ಗುಂಡ್ಲುಪೇಟೆ ಉಪ ಚುನಾವಣೆ ಮುಂದಿನ ವಿಧಾನಸಭಾ ಚುನಾವಣೆಗೆ ಯಾವುದೇ ರೀತಿಯಲ್ಲೂ ದಿಕ್ಸೂಚಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ನಂಜನಗೂಡು-ಗುಂಡ್ಲುಪೇಟೆ ಉಪ ಚುನಾವಣೆಯಲ್ಲಿ ಬಿಜೆಪಿ ಪಕ್ಷ ತೀವ್ರ ಹಿನ್ನಡೆ ಕಂಡಿರುವ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಎಸ್ ವೈ, ಚುನಾವಣೆಯಲ್ಲಿ ಬಿಜೆಪಿ ಹಿನ್ನಡೆಯನುಭವಿಸಿದೆ,  ಮತದಾರರ ಆದೇಶವನ್ನು ನಾವು ಸ್ವಾಗತಿಸುತ್ತೇವೆ. ಚುನಾವಣೆಯಲ್ಲಿ ಹಿನ್ನಡೆಯಾದ ಮಾತ್ರಕ್ಕೆ ಮತದಾರರಿಂದ ದೂರ ಉಳಿಯುವ ಪ್ರಶ್ನೆಯೇ ಇಲ್ಲ. ಕ್ಷೇತ್ರದಲ್ಲೇ ಅಭ್ಯರ್ಥಿಗಳು ಇದ್ದು ಪಕ್ಷದ ಸಂಘಟನೆಗೆ ಸ್ಪಂದಿಸುತ್ತಾರೆ.  ಮುಂದಿನ ದಿನಗಳಲ್ಲಿ ಮತದಾರರಿಗೆ ಪರಿಣಾಮಕಾರಿಯಾಗಿ ಸ್ಪಂದಿಸುತ್ತೇವೆ ಎಂದು ಹೇಳಿದರು.

ಡಿಕೆಶಿ ಅಂಹಕಾರದ ಮಾತಿಗೆ ಮುಂದಿನ ಚುನಾವಣೆಯಲ್ಲಿ ಮತದಾರರು ಉತ್ತರ ನೀಡಲಿದ್ದಾರೆ. ಕಾಂಗ್ರೆಸ್ ಪಕ್ಷ ಆಡಳಿತ ಯಂತ್ರವನ್ನು ದುರಪಯೋಗ ಪಡಿಸಿಕೊಂಡು ಉಪ ಚುನಾವಣೆ ಗೆದ್ದಿದೆ. ಹಣ ಬಲ ಹಾಗೂ ಅಧಿಕಾರದ ಬಲ  ಕೆಲಸ ಮಾಡಿದ್ದು ಬಿಜೆಪಿಗೆ ಹಿನ್ನಡೆಯಾಗಿದೆ ಎಂದು ಬಿಎಸ್ ವೈ ಹೇಳಿದರು.

ಇದೇ ವೇಳೆ ಮಾತನಾಡಿದ ಆರ್ ಅಶೋಕ್ ಅವರು, ಕಾಂಗ್ರೆಸ್ ಪಕ್ಷ ಆಡಳಿತಯಂತ್ರವನ್ನು ದುರುಪಯೋಗ ಪಡಿಸಿಕೊಂಡು ಚುನಾವಣೆ ಗೆದ್ದಿದೆ ಎಂದು ಹೇಳಿದರು. ಇನ್ನು ಚುನಾವಣಾ ಸೋಲಿನ ಕುರಿತು ಮಾತನಾಡಿದ ಕೆಎಸ್  ಈಶ್ವರಪ್ಪ ಅವರು, ಚುನಾವಣಾ ಸೋಲು ನಿರಾಶೆ ಮತ್ತು ಅಚ್ಚರಿ ತಂದಿದೆ. ಮುಂದಿನ ದಿನಗಳಲ್ಲಿ ಪಕ್ಷದ ಸಭೆಯಲ್ಲಿ ಸೋಲಿನ ಕುರಿತು ಪರಾಮರ್ಶೆ ನಡೆಸಲಾಗುತ್ತದೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com