ವಿದ್ಯುತ್ ಬೆಲೆ ಏರಿಕೆಯಿಂದಾಗಿ ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಸಿಬ್ಬಂದಿಗಳನ್ನು ಶತ್ರುಗಳಂತೆ ಕಾಣುತ್ತಿರುವ ಹಿನ್ನಲೆಯಲ್ಲಿ ಪವರ್ ಗ್ರಿಡ್ ಕಾರ್ಪೋರೇಷನ್ ಆಫ್ ಇಂಡಿಯಾದ ಅಧಿಕಾರಿಗಳು ರಕ್ಷಣೆ ನೀಡುವಂತೆ ಪೊಲೀಸರ ಮೊರೆ ಹೋಗಿದ್ದಾರೆ. ಈ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಡಿ.ಕೆ.ಶಿವಕುಮಾರ್ ಅವರು, ವಿದ್ಯುತ್ ದರ ಏರಿಕೆಯನ್ನು ರಾಜ್ಯ ಸರ್ಕಾರ ಮಾಡಿಲ್ಲ. ದರ ಏರಿಕೆ ವಿಚಾರದಲ್ಲಿ ರಾಜ್ಯ ಸರ್ಕಾರ ಮಧ್ಯಪ್ರವೇಶಿಸುವುದಿಲ್ಲ ಎಂದು ಹೇಳಿದರು. ಕೈಗಾರಿಕೆಗಳಲ್ಲಿ ಹೆಚ್ಚು ವಿದ್ಯುತ್ ಬಳಕೆಗೆ ರಿಯಾಯಿತ ದರ ನಿಗದಿಮಾಡಿದ್ದಾರೆ. ಕೆಇ.ಆರ್.ಸಿ ಗ್ರಾಹಕರ ಅಭಿಪ್ರಾಯ ಪಡೆದು ದರ ಏರಿಕೆ ಮಾಡಿದ್ದಾರೆ. ಸರ್ಕಾರ, ವಿದ್ಯುತ್ ಸರಬರಾಜು ಕಂಪನಿಗಳು ಹಾಗೂ ಗ್ರಾಹಕ ಮೂರು ವರ್ಗದ ಹಿತಾಸಕ್ತಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಆಯೋಗವು ನ್ಯಾಯಸಮ್ಮತವಾದ ತೀರ್ಮಾನವನ್ನು ಪ್ರಕಟಿಸಿದೆ ಎಂದು ಹೇಳಿದ್ದಾರೆ.