ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಈ ವರ್ಷ 363 ಅಧಿಕ ಸ್ನಾತಕೋತ್ತರ ವೈದ್ಯಕೀಯ ಸೀಟುಗಳು ಲಭ್ಯ

ಮುಂದಿನ ಶೈಕ್ಷಣಿಕ ವರ್ಷದಲ್ಲಿ 363 ಹೆಚ್ಚು ಸ್ನಾತಕೋತ್ತರ ವೈದ್ಯಕೀಯ ಸೀಟುಗಳು ಖಾಸಗಿ ವೈದ್ಯಕೀಯ...
ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದಲ್ಲಿ 363 ಹೆಚ್ಚು ಸ್ನಾತಕೋತ್ತರ ವೈದ್ಯಕೀಯ ಸೀಟುಗಳು ಖಾಸಗಿ ವೈದ್ಯಕೀಯ ಕಾಲೇಜು ಮತ್ತು ವೈದ್ಯಕೀಯ ವಿಶ್ವವಿದ್ಯಾಲಯಗಳಿಗೆ ಸೀಟು ಹಂಚಿಕೆ ಪ್ರಕ್ರಿಯೆಯಲ್ಲಿ ಲಭ್ಯವಾಗಲಿದೆ.
ಸಹಮತದ ಒಪ್ಪಂದದಡಿಯಲ್ಲಿ ರಾಜ್ಯ ಸರ್ಕಾರದೊಂದಿಗೆ ಹಂಚಿಕೆ ಮಾಡುವ ನಿಗದಿತ ಸೀಟುಗಳನ್ನು ಹೊರತುಪಡಿಸಿ, ಈ ವರ್ಷದಿಂದ ಎಲ್ಲಾ ಖಾಸಗಿ ಮತ್ತು ಡೀಮ್ಡ್ ವೈದ್ಯಕೀಯ ವಿಶ್ವವಿದ್ಯಾಲಯಗಳು ಕರ್ನಾಟಕದ ವಿದ್ಯಾರ್ಥಿಗಳಿಗೆ ಅವರ ಸಾಂಸ್ಥಿಕ ಖೋಟಾ(ಖಾಸಗಿ)ದಿಂದ ಶೇಕಡಾ 30ರಷ್ಟು ಸೀಟುಗಳನ್ನು ಕಾಯ್ದಿರಿಸಲಿದೆ.
ಈ ಮೂಲಕ ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳಿಗೆ ಈ ವರ್ಷ ಲಭ್ಯವಿರುವ ಸೀಟುಗಳ ಪ್ರಮಾಣ ಒಟ್ಟು 2,281 ಸ್ನಾತಕೋತ್ತರ ವೈದ್ಯಕೀಯ ಸೀಟುಗಳ ಪೈಕಿ ಶೇಕಡಾ 64ರಷ್ಟು ಲಭ್ಯವಾಗಲಿದೆ.
ಕರ್ನಾಟಕ ವೃತ್ತಿಪರ ಶಿಕ್ಷಣ ಸಂಸ್ಥೆಗಳು(ಪ್ರವೇಶ ನಿಯಂತ್ರಣ ಮತ್ತು ಶುಲ್ಕ ನಿರ್ಧಾರ) ಕಾಯ್ದೆ 2006ಕ್ಕೆ ತಿದ್ದುಪಡಿ ತರಲಾಗಿದ್ದು, ಅದರಲ್ಲಿ ಖಾಸಗಿ, ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಕರ್ನಾಟಕದ ವಿದ್ಯಾರ್ಥಿಗಳಿಗೆ ಶೇಕಡಾ 30ರಷ್ಟು ಸಾಂಸ್ಥಿಕ ಕೋಟಾ ನೀಡಬೇಕೆಂದು ತಿಳಿಸಲಾಗಿದೆ.
ಈ ತಿದ್ದುಪಡಿಯಿಂದಾಗಿ ಸ್ನಾತಕೋತ್ತರ ಕೋರ್ಸ್ ಗಳಲ್ಲಿ ರಾಜ್ಯದ ವಿದ್ಯಾರ್ಥಿಗಳಿಗೆ ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಲಭ್ಯವಿರುವ ಸೀಟುಗಳ ಪ್ರಮಾಣ ಈ ವರ್ಷ 1,096ರಿಂದ 1,459ಕ್ಕೆ ಏರಿಕೆಯಾಗಿದೆ.
ಶೇಕಡಾ 30 ಸೀಟುಗಳಿಗೆ ವಿನಾಯ್ತಿ ಇರುವುದಿಲ್ಲ. ರಾಜ್ಯ ಸರ್ಕಾರ ಮತ್ತು ಖಾಸಗಿ ವೈದ್ಯಕೀಯ ಕಾಲೇಜುಗಳು ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳ ನಡುವಿನ ಕ್ರೋಢೀಕೃತ ಒಪ್ಪಂದದ ಪ್ರಕಾರ ವಿದ್ಯಾರ್ಥಿಗಳು ಶುಲ್ಕ ಕಟ್ಟಬೇಕಾಗುತ್ತದೆ. 
ರಾಜ್ಯದ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲು ನಾವು ಬಯಸುತ್ತೇವೆ. ಅರ್ಹತೆಯುಳ್ಳ ವಿದ್ಯಾರ್ಥಿಗಳಿದ್ದರೂ ಸಾಂಸ್ಥಿಕ ಕೋಟಾದಡಿ ಆದ್ಯತೆಯಿಲ್ಲದಿರುವುದರಿಂದ ರಾಜ್ಯದ ಅನೇಕ ವಿದ್ಯಾರ್ಥಿಗಳು ಸೀಟು ಪಡೆಯುವುದಿಲ್ಲ. ಇದನ್ನು ಆಧಾರವಾಗಿಟ್ಟುಕೊಂಡು  ವ್ಯವಸ್ಥಾಪಕರ ಮನವೊಲಿಸಿ ರಾಜ್ಯದ ವಿದ್ಯಾರ್ಥಿಗಳಿಗೆ ಶೇಕಡಾ 30ರಷ್ಟು ಸೀಟು ನೀಡಲು ಒಪ್ಪಿಕೊಂಡಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com