2019ರ ವೇಳೆಗೆ ಸಿಇಟಿ ರದ್ದು?

ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ವೃತ್ತಿಪರ ಪದವಿ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆಸುವ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ವೃತ್ತಿಪರ ಪದವಿ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆಸುವ  ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಯನ್ನು 2019ರಿಂದ ತೆಗೆದುಹಾಕುವ ಸಾಧ್ಯತೆಯಿದೆ.
ಪ್ರವೇಶ ಪರೀಕ್ಷೆ ನಡೆಸುವ ಜವಾಬ್ದಾರಿ ಕಳೆದ ಎರಡು ವರ್ಷಗಳಿಂದ ಕಡಿಮೆಯಾಗುತ್ತಿದೆ. ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳಿಗೆ ಈಗಾಗಲೇ ಒಂದೇ ಸಾಮಾನ್ಯ ಪ್ರವೇಶ ಪರೀಕ್ಷೆಯಾಗಿದೆ. ಆಯುಷ್ ಕೋರ್ಸ್ ಗಳಿಗೂ ಅದನ್ನೇ ಜಾರಿಗೆ ತರಲಾಗಿದೆ. ಕೇಂದ್ರ ಸರ್ಕಾರ ಎಂಜಿನಿಯರಿಂಗ್ ಕೋರ್ಸ್ ಗಳ ಪ್ರವೇಶಕ್ಕೆ ಏಕ ಪ್ರವೇಶ ಪರೀಕ್ಷೆಯನ್ನು ನಿಗದಿಪಡಿಸಲು ನೋಡುತ್ತಿದೆ, ಹೀಗಿರುವಾಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅವಶ್ಯಕತೆಯೇನಿದೆ  ಎಂದು ಕೆಇಎ ಅಧಿಕಾರಿಗಳು ಕೇಳುತ್ತಾರೆ.
ಪ್ರಾಧಿಕಾರದಿಂದ ಸಿಕ್ಕಿರುವ ಮಾಹಿತಿ ಪ್ರಕಾರ, 2019ರ ವೇಳೆಗೆ ಪಶು ಮತ್ತು ಕೃಷಿ ಶಿಕ್ಷಣ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಪ್ರವೇಶ ಪರೀಕ್ಷೆಯನ್ನು ನಡೆಸಲಿದೆ ಎಂದು ತಿಳಿದುಬಂದಿದೆ. 
ದಾಖಲೆಗಳ ಆನ್ ಲೈನ್ ಪರಿಶೀಲನೆಯನ್ನು ಇತ್ತೀಚೆಗೆ ಪ್ರಾಧಿಕಾರ ನಿಲ್ಲಿಸಿದೆ. ಆನ್ ಲೈನ್ ಪರಿಶೀಲನೆ ಕುರಿತು ರಾಷ್ಟ್ರೀಯ ಮಾಹಿತಿ ಕೇಂದ್ರದ ಜೊತೆಗೆ ನಾವು ಚರ್ಚೆ ನಡೆಸಿದ್ದೇವೆ.
ಕೇಂದ್ರ ಸರ್ಕಾರ ಏಕ ಪ್ರವೇಶ ಪರೀಕ್ಷೆಯನ್ನು ಪ್ರಸ್ತಾಪಿಸುತ್ತಿರುವ ಸಂದರ್ಭದಲ್ಲಿ ಇ-ಪರಿಶೀಲನೆಗೆ ಹಣ ಹೂಡುವುದರಿಂದ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಹಣಕಾಸಿನ ಹೊರೆ ಬೀಳುತ್ತದೆ ಎಂದು ನಾವು ಯೋಚಿಸುತ್ತೇವೆ ಎಂದು ಕೆಇಎ ಅಧಿಕಾರಿಗಳು ಹೇಳುತ್ತಾರೆ.
ಎಂಜಿನಿಯರಿಂಗ್ ಕೋರ್ಸ್ ಗಳ ಪ್ರವೇಶಕ್ಕೆ ಜೆಇಇಯನ್ನು ಅಖಿಲ ಭಾರತ ಏಕ ಪ್ರವೇಶ ಪರೀಕ್ಷೆಯನ್ನಾಗಿ ಮಾಡಲು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ಯೋಚಿಸುತ್ತಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com