ಬಿಸಿಲ ಬೇಗೆಯಿಂದ ಬಸವಳಿದಿದ್ದ ಜನರಿಗೆ ತಂಪೆರದ ಮಳೆರಾಯ

ಬೆಂಗಳೂರು ಮತ್ತು ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಂಜೆ ಸುರಿದ ಬಿರುಗಾಳಿ ಕೂಡಿದ ಮಳೆಯು ಬಿಸಿಲ ಬೇಗೆಯಿಂದ ಬಸವಳಿದಿದ್ದ ಜನರಿಗೆ ...
ಬೆಂಗಳೂರಲ್ಲಿ ನಿನ್ನೆ ಸುರಿದ ಮಳೆ
ಬೆಂಗಳೂರಲ್ಲಿ ನಿನ್ನೆ ಸುರಿದ ಮಳೆ
ಬೆಂಗಳೂರು: ಬೆಂಗಳೂರು ಮತ್ತು ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಂಜೆ ಸುರಿದ ಬಿರುಗಾಳಿ ಕೂಡಿದ ಮಳೆಯು ಬಿಸಿಲ ಬೇಗೆಯಿಂದ ಬಸವಳಿದಿದ್ದ ಜನರಿಗೆ ತಂಪೆರೆದಿದೆ. 
ಕಳೆದ ರಾತ್ರಿ ಬೆಂಗಳೂರು ನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಿದೆ, ಮೈಸೂರು ಜಿಲ್ಲೆಯಲ್ಲಿ ದಾಖಲೆಯ ಪ್ರಮಾಣದಲ್ಲಿ ಮಳೆ ಸುರಿದಿದ್ದು ತಾಪಮಾನ ಕಡಿಮೆಯಾಗಿದೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು  ಇಲಾಖೆ ಪ್ರಕಾರ ಬೆಂಗಳೂರು ಉತ್ತರ ತಾಲೂಕಿನ ಸೊಂಡೆಕೊಪ್ಪದಲ್ಲಿ 13 ಮಿಮಿ ಮಳೆಯಾಗಿದೆ. ನಿನ್ನೆ ರಾತ್ರಿ 9.30ರ ವರೆಗೆ ರಾಜ್ಯದಲ್ಲಿ ಎಷ್ಟು ಪ್ರಮಾಣದ ಮಳೆಯಾಗಿದೆ ಎಂಬ ಬಗ್ಗೆ ಇಲಾಖೆ ಮಾಹಿತಿ ನೀಡಿದೆ.
ಮೈಸೂರು ಜಿಲ್ಲೆಯ ಪಿರಿಯಾ ಪಟ್ಟಣಹಿತ್ತೆನ ಹೆಬ್ಬಿಗಿಲಲ್ಲಿ ಅಧಿಕ ಪ್ರಮಾಣದ ಮಳೆಯಾಗಿದೆ, ಬೆಂಗಳೂರು ನಗರದಲ್ಲಿ ಸಾಧಾರಣ ಮಳೆಯಾಗಿದ್ದು ಸುಮಾರು 9ಮಿಮೀಟರಿ ನಿಂದ 0.5 ಮಿಮೀಟರ್ ಮಳೆಯಾಗಿದೆ.
ಬೆಂಗಳೂರು ಹೊರತು ಪಡಿಸಿ, ಚಿಕ್ಕಮಗಳೂರು, ಹಾಸನ, ಮೈಸೂರು, ಕೊಡಗು, ತುಮಕೂರು, ಚಾಮರಾಜನಗರ, ರಾಮನಗರ, ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಮಳೆಯಾಗಿದೆ. ಇನ್ನು ಉತ್ತರ ಕರ್ನಾಟಕದಲ್ಲಿ ಬಿಸಿಲ ತಾಪ ಮುಂದುವರಿದಿದ್ದು, 40 ಡಿಗ್ರಿ ಸೆಲ್ಸಿಯಲ್ ಉಷ್ಣಾಂಸ ದಾಖಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com