ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಮಂಚಾಲೆ ಗ್ರಾಮದ ಬಳಿ ಬುಧವಾರ ಖಾಸಗಿ ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇಂದು ಸಂಜೆ ಮಂಚಾಲೆ ಗ್ರಾಮದ ಬಳಿ ಈ ದುರ್ಘಟನೆ ಸಂಭವಿಸಿದ್ದು, ಕಾರಿನಲ್ಲಿದ್ದ ಮೂವರು ಪುರುಷರು ಹಾಗೂ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ.
ಮೃತಪಟ್ಟವರು ಸೊರಬ ತಾಲೂಕಿನ ನಡಹಳ್ಳಿ ಗ್ರಾಮದವರು ಎಂದು ತಿಳಿದು ಬಂದಿದ್ದು, ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿರುವುದಾಗಿ ಪ್ರತ್ಯಕ್ಷದರ್ಶಿಗಳು ಮಾಧ್ಯಮಗಳಿಗೆ ತಿಳಿಸಿದ್ದಾರೆ.