ಸತ್ಯರಾಜ್
ರಾಜ್ಯ
ಕಟ್ಟಪ್ಪ ಪಾತ್ರಧಾರಿ ಸತ್ಯರಾಜ್ ಕ್ಷಮೆಗೆ ಆಗ್ರಹ: ಏಪ್ರಿಲ್ 28 ರಂದು ಕರ್ನಾಟಕ ಬಂದ್
ಕಾವೇರಿ ಮತ್ತು ಕನ್ನಡಿಗರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ತಮಿಳು ನಟ ಸತ್ಯರಾಜ್ ಕ್ಷಮೆ ಕೇಳಬೇಕು, ಇಲ್ಲವಾದರೇ ಏಪ್ರಿಲ್ 28ರಂದು ಕರ್ನಾಟಕ ...
ಬೆಂಗಳೂರು: ಕಾವೇರಿ ಮತ್ತು ಕನ್ನಡಿಗರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ತಮಿಳು ನಟ ಸತ್ಯರಾಜ್ ಕ್ಷಮೆ ಕೇಳಬೇಕು, ಇಲ್ಲವಾದರೇ ಏಪ್ರಿಲ್ 28ರಂದು ಕರ್ನಾಟಕ ಬಂದ್ ಮಾಡುವುದಾಗಿ ಕನ್ನಡಪರ ಸಂಘಟನೆಗಳು ಎಚ್ಚರಿಕೆ ನೀಡಿವೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಾಟಾಳ್ ನಾಗರಾಜ್, ನಟ ಸತ್ಯರಾಜ್ ಹುಚ್ಚನ ರೀತಿ ಮಾತನಾಡಿದ್ದಾರೆ. ನಮ್ಮ ಹೋರಾಟ ಏನಿದ್ರೂ ಸತ್ಯರಾಜ್ ವಿರುದ್ಧ ಮಾತ್ರ ಬಹಿರಂಗ ಕ್ಷಮೆಯಾಚಿಸದ ಹೊರತು ರಾಜ್ಯದಲ್ಲಿ ಬಾಹುಬಲಿ-2 ರಿಲೀಸ್ ಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.
ಏಪ್ರಿಲ್ 28ರಂದು ಟೌನ್ ಹಾಲ್ ನಿಂದ ಫ್ರೀಡಂ ಪಾರ್ಕ್ ವರೆಗೆ ರಾಲಿ ನಡೆಸಲಾಗುವುದು ಎಂದು ವಾಟಾಳ್ ತಿಳಿಸಿದ್ದಾರೆ. ಬಾಹುಬಲಿ ಚಿತ್ರದ ನಿರ್ಮಾಪಕರೇ ವಿತರಣೆ ಮಾಡುತ್ತಿದ್ದಾರೆ. ಆದರೆ ಕರ್ನಾಟಕದಲ್ಲಿ ವಿತರಣೆ ಹಕ್ಕು ಇದುವರೆಗೂ ಯಾರೂ ತೆಗೆದುಕೊಂಡಿಲ್ಲ. ಅದಕ್ಕಾಗಿ ವಿತರಕರಿಗೆ ಧನ್ಯವಾದ ತಿಳಿಸುವುದಾಗಿ ಸಾರಾ ಗೋವಿಂದು ತಿಳಿಸಿದ್ದಾರೆ. ವಿಷಯದ ಸಂಬಂಧವಾಗಿ ಇದುವರೆಗೂ ನಿರ್ಮಾಪಕರು ಚಲನಚಿತ್ರ ವಾಣಿಜ್ಯ ಮಂಡಳಿಯನ್ನು ಸಂಪರ್ಕಿಸಿಲ್ಲ, ಈ ಸಂಬಂಧ ಯಾರೂ ಮಾತುಕತೆ ನಡೆಸಿಲ್ಲ ಎಂದು ಹೇಳಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ