ಕೆಪಿಎಸ್ಸಿ ಅಕ್ರಮ: ಮಾಜಿ ಅಧ್ಯಕ್ಷ ಗೋನಾಳ್ ಭೀಮಪ್ಪ ವಿರುದ್ಧದ ವಿಚಾರಣೆ ರದ್ಧುಗೊಳಿಸಿದ ಹೈಕೋರ್ಟ್

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಮಾಜಿ ಅಧ್ಯಕ್ಷ ಗೋನಾಳ್ ಭೀಮಪ್ಪ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿ ಅಧೀನ ನ್ಯಾಯಾಲಯದಲ್ಲಿ ..
ಕರ್ನಾಟಕ ಹೈಕೋರ್ಟ್
ಕರ್ನಾಟಕ ಹೈಕೋರ್ಟ್
ಬೆಂಗಳೂರು:  ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಮಾಜಿ ಅಧ್ಯಕ್ಷ ಗೋನಾಳ್ ಭೀಮಪ್ಪ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿ  ಅಧೀನ ನ್ಯಾಯಾಲಯದಲ್ಲಿ ದಾಖಲಿಸಿದ್ದ ದೂರಿನ ವಿಚಾರಣೆಯನ್ನು ಹೈಕೋರ್ಟ್‌ ಬುಧವಾರ ರದ್ದುಪಡಿಸಿದೆ. ಪ್ರಕರಣ ರದ್ದು ಕೋರಿ ಗೋನಾಳ್ ಭೀಮಪ್ಪ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಆನಂದ ಬೈರಾರೆಡ್ಡಿ ಅವರಿದ್ದ ಏಕಸದಸ್ಯ ಪೀಠವು ಪುರಸ್ಕರಿಸಿದೆ.
ಕೆಪಿಎಸ್‌ಸಿ ಅಧ್ಯಕ್ಷರಾಗಿದ್ದ ಗೋನಾಳ್‌ ಭೀಮಪ್ಪ 2011ನೇ ಸಾಲಿನ ‘ಎ’ ಮತ್ತು ‘ಬಿ’ ಗ್ರೂಪ್ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ನೇಮಕಾತಿ ವೇಳೆ ಅಕ್ರಮ ನಡೆಸಿದ್ದಾರೆ ಎಂದು ಆರೋಪಿಸಿ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ದೂರು ದಾಖಲಿಸಿತ್ತು.
ದೂರು ದಾಖಲಿಸಿದ ಮೂರು ವರ್ಷಗಳ ನಂತರ ನನ್ನ ವಿರುದ್ಧ  ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ಇದನ್ನು ಕೋರ್ಟ್‌ ಅಪರಾಧ ಎಂದು ಪರಿಗಣಿಸಿದೆ ಎಂಬುದಾಗಿ ಭೀಮಪ್ಪ ಅರ್ಜಿಯಲ್ಲಿ ಆಕ್ಷೇಪಿಸಿದ್ದರು. 
ಗೋನಾಳ್ ಭೀಮಪ್ಪ ಮತ್ತು 7 ಮಂದಿ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ರಾಜ್ಯ ಸರ್ಕಾರ ಜೂನ್ 25, 2013 ರಂದು ದೂರು ದಾಖಲಿಸಿತ್ತು. ಮೇ 12, 2014 ರಂದು ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿಯಲ್ಲಿ ಚಾರ್ಜ್ ಶೀಟ್ ಸಲ್ಲಿಸಲಾಗಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com