ಕೇಂದ್ರದ ಉಡಾನ್ ಯೋಜನೆಗೆ ಮೈಸೂರು, ಬಳ್ಳಾರಿ, ಬೀದರ್ ವಿಮಾನ ನಿಲ್ದಾಣಗಳು ಸೇರ್ಪಡೆ

ನಾಗರಿಕ ವಿಮಾನಯಾನ ಮತ್ತು ವಿಮಾನ ನಿಲ್ದಾಣ ಪ್ರಾಧಿಕಾರ ಸಚಿವಾಲಯ ಜೊತೆ ರಾಜ್ಯ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ನಾಗರಿಕ ವಿಮಾನಯಾನ ಮತ್ತು ವಿಮಾನ ನಿಲ್ದಾಣ ಪ್ರಾಧಿಕಾರ ಸಚಿವಾಲಯ ಜೊತೆ ರಾಜ್ಯ ಸರ್ಕಾರ ತಿಳುವಳಿಕೆ ಒಪ್ಪಂದಕ್ಕೆ ಸಹಿ ಹಾಕಿದ್ದು, ಮೂಲಕ ಮೈಸೂರು, ಬೀದರ್ ಮತ್ತು ಬಳ್ಳಾರಿ ವಿಮಾನ ನಿಲ್ದಾಣಗಳಿಗೆ ವಿಮಾನ ಸೇವೆಗಳನ್ನು ಅಭಿವೃದ್ಧಿಪಡಿಸಬಹುದಾಗಿದೆ. ಕೇಂದ್ರ ಸರ್ಕಾರದ ಸ್ಥಳೀಯ ಸಂಪರ್ಕ ಯೋಜನೆಯಾದ ಉಡಾನ್ ಯೋಜನೆಯಡಿ ಈ ಸಂಪರ್ಕ ಕಲ್ಪಿಸುವುದಾಗಿದೆ.

ಸ್ಥಳೀಯ ಸಂಪರ್ಕ ಯೋಜನೆಯಡಿ ವಿಮಾನ ಸೇವೆಗಳನ್ನು ರಿಯಾಯಿತಿ ಮತ್ತು ಪ್ರೋತ್ಸಾಹಧನಗಳೊಂದಿಗೆ ಒದಗಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ನಿಲುವಳಿ ಒಪ್ಪಂದ ಮಾಡಿಕೊಳ್ಳಲಿವೆ. ಏವಿಯೇಷನ್ ಟರ್ಬೈನ್ ಇಂಧನದ ಮಾರಾಟ ತೆರಿಗೆಯಲ್ಲಿ ರಿಯಾಯಿತಿ, ವಿಮಾನ ನಿಲ್ದಾಣಗಳ ಅಭಿವೃದ್ಧಿ ಮತ್ತು ವಿಸ್ತರಣೆಯನ್ನು ಉಚಿತವಾಗಿ ನೆರವೇರಿಸುವುದು, ಕಾರ್ಯಸಾಧ್ಯತೆಯ ಅಂತರ ನಿಧಿಯನ್ನು, ಕೇಂದ್ರ ಸರ್ಕಾರ ಶೇಕಡಾ 80 ಮತ್ತು ರಾಜ್ಯ ಸರ್ಕಾರ ಶೇಕಡಾ 20ರಷ್ಟು  ಒದಗಿಸಲಿದೆ.

ಮುಂದಿನ ಸುತ್ತಿನ ಹರಾಜಿನಲ್ಲಿ ಇನ್ನಷ್ಟು ವಿಮಾನ ನಿಲ್ದಾಣಗಳನ್ನು ಸ್ಥಳೀಯ ಸಂಪರ್ಕ ಯೋಜನೆಯಡಿ ತರಲಾಗುವುದು ಎಂದು ಕೈಗಾರಿಕಾ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣದ ರನ್ ವೇಯನ್ನು ವಿಸ್ತರಿಸುವುದು ಮತ್ತು ಬೆಳಗಾವಿ, ಹುಬ್ಬಳ್ಳಿ ಮತ್ತು ಮೈಸೂರು ವಿಮಾನ ನಿಲ್ದಾಣಗಳಿಗೆ ಸಂಬಂಧಪಟ್ಟ ವಿಷಯಗಳ ಕುರಿತು ನಮ್ಮ ಅಧಿಕಾರಿಗಳು ನಾಗರಿಕ ವಿಮಾನ ಯಾನ ಕಾರ್ಯದರ್ಶಿಗಳ ಜೊತೆ ಮಾತುಕತೆ ನಡೆಸಿದ್ದಾರೆ ಎಂದರು.

ಬೀದರ್ ವಿಮಾನ ನಿಲ್ದಾಣದಿಂದ ಕಾರ್ಯನಿರ್ವಹಿಸುವ ವಿಮಾನಗಳಿಗೆ ಸಂಬಂಧಪಟ್ಟ ವಿವಾದಗಳನ್ನು ಬಗೆಹರಿಸುವ ವಿಶ್ವಾಸವಿದೆ ಎಂದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಉದನ್ ಯೋಜನೆಯನ್ನು ಶಿಮ್ಲಾ ವಿಮಾನ ನಿಲ್ದಾಣದ ಜುಬ್ಬರ್ ಹಟ್ಟಿಯಲ್ಲಿ ಏಪ್ರಿಲ್ 27ರಂದು ಉದ್ಘಾಟಿಸಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com