ಕೊಪ್ಪಳ: ಪ್ರಧಾನಿ ನರೇಂದ್ರ ಮೋದಿ ಬಗ್ಗೆ ನೀಡಿದ್ದ ತಮ್ಮ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದಂತೆಯೇ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. "ಪ್ರಧಾನಿ ನರೇಂದ್ರ ಮೋದಿ ಅವರು ಸಾಯಲಿ ಬಿಡಿ ಎಂದು ಹೇಳಿಲ್ಲ. ಮೋದಿ ಅವರ ಬಗ್ಗೆ ಅಪಾರ ಗೌರವವಿದೆ, ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಹೇಳಿದ್ದಾರೆ.