ಬೆಂಗಳೂರು: ಎಚ್ ಎಎಲ್ ವಿಮಾನ ನಿಲ್ದಾಣದಿಂದ ಶ್ರವಣಬೆಳಗೊಳಕ್ಕೆ ಹೊರಟಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಲಿಕಾಪ್ಟರ್ ಗೆ ಹದ್ದು ಡಿಕ್ಕಿ ಹೊಡೆದಿದ್ದು, ಪೈಲಟ್ ಸಮಯಪ್ರಜ್ಞೆಯಿಂದ ಭಾರೀ ಅನಾಹುತದಿಂದ ತಪ್ಪಿದೆ.
ಸಿಎಂ ಸಿದ್ದರಾಮಯ್ಯ ತೆರಳುತ್ತಿದ್ದ ಹೆಲಿಕಾಪ್ಟರ್ ಟೇಕ್‌ಆಫ್ ಆದ ಕೆಲವೇ ಕ್ಷಣದಲ್ಲಿ ಹದ್ದು ಬಂದು ಡಿಕ್ಕಿ ಹೊಡೆದಿದೆ. ಪೈಲಟ್‌ನ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ.
ಹದ್ದು ಡಿಕ್ಕಿ ಹೊಡೆದ ತಕ್ಷಣವೇ ಪೈಲಟ್ ಹೆಲಿಕಾಪ್ಟರ್‌ಅನ್ನು ಲ್ಯಾಂಡ್ ಮಾಡಿದ್ದಾರೆ. ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಜೊತೆಗೆ ಗೃಹ ಸಚಿವ ಪರಮೇಶ್ವರ್ ಸಹ ಇದ್ದರು.