ರಾಜ್ಯದ ಆರು ವಿವಿಗಳಲ್ಲಿ ಮೂಲ ಸೌಕರ್ಯ ಕೊರತೆ: ಆಯೋಗ

ಕಳೆದ 10 ವರ್ಷಗಳ ಹಿಂದೆ ಸ್ಥಾಪಿಸಲ್ಪಟ್ಟ ರಾಜ್ಯದ 6 ವಿಶ್ವವಿದ್ಯಾಲಯಗಳು ಮೂಲಭೂತ ಸೌಕರ್ಯಗಳ...
ಬಳ್ಳಾರಿ ವಿಶ್ವವಿದ್ಯಾಲಯ
ಬಳ್ಳಾರಿ ವಿಶ್ವವಿದ್ಯಾಲಯ
ಬೆಂಗಳೂರು: ಕಳೆದ 10 ವರ್ಷಗಳ ಹಿಂದೆ ಸ್ಥಾಪಿಸಲ್ಪಟ್ಟ ರಾಜ್ಯದ 6 ವಿಶ್ವವಿದ್ಯಾಲಯಗಳು ಮೂಲಭೂತ ಸೌಕರ್ಯಗಳ ಕೊರತೆಯನ್ನು ಹೊಂದಿವೆ ಎಂದು ವಿಶ್ವವಿದ್ಯಾಲಯ ವಿಮರ್ಶಾ ಆಯೋಗ ತಿಳಿಸಿದೆ. ನಿನ್ನೆ ರಾಜ್ಯಪಾಲ ವಜುಭಾಯಿ ವಾಲಾ ಅವರು ನಡೆಸಿದ ಆಯೋಗದ ಸಭೆಯಲ್ಲಿ ಈ ವಿಷಯ ತಿಳಿದುಬಂದಿದೆ.
ದಾವಣಗೆರೆ ವಿ.ವಿ, ಕೃಷ್ಣದೇವರಾಯ ವಿ.ವಿ, ಬಳ್ಳಾರಿ, ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ, ಬೆಳಗಾವಿ ಸಂಸ್ಕೃತ ವಿ.ವಿ, ಗಂಗೂಬಾಯಿ ಹಾನಗಲ್ ಸಂಗೀತ ವಿ.ವಿ ಮತ್ತು ಜನಪದ ವಿಶ್ವವಿದ್ಯಾಲಯಗಳು ಮೂಲಭೂತ ಸೌಕರ್ಯ ಕೊರತೆ ಎದುರಿಸುತ್ತಿರುವ ವಿಶ್ವವಿದ್ಯಾಲಯಗಳಾಗಿವೆ.
ವಿಮರ್ಶಾ ಆಯೋಗ ವಿಶ್ವವಿದ್ಯಾಲಯಗಳಿಗೆ ಭೇಟಿ ನೀಡಿ ಈ ಸಭೆಯನ್ನು ನಡೆಸಲಾಗಿದೆ. ಕಳೆದ 10 ವರ್ಷಗಳ ಹಿಂದೆ ಸ್ಥಾಪಿಸಲ್ಪಟ್ಟ ಈ ವಿಶ್ವವಿದ್ಯಾಲಯಗಳು ಹಲವು ಮೂಲಭೂತ ಸೌಲಭ್ಯಗಳ ಕೊರತೆಯನ್ನು ಎದುರಿಸುತ್ತಿದ್ದು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಲು ಯತ್ನಿಸಿದೆ ಎಂದು ಆಯೋಗದ ಸದಸ್ಯರೊಬ್ಬರು ಹೇಳಿದ್ದಾರೆ.
ಈ ವಿಶ್ವವಿದ್ಯಾಲಯಗಳ ಪ್ರತಿನಿಧಿಗಳು ಕೂಡ ಸಭೆಯಲ್ಲಿ ಹಾಜರಿದ್ದರು. ಎಲ್ಲಾ ಆರು ವಿಶ್ವವಿದ್ಯಾಲಯಗಳ ಉಪ ಕುಲಪತಿಗಳು ಮತ್ತು ರಿಜಿಸ್ಟ್ರಾರ್ ಗಳು ವಿಶ್ವವಿದ್ಯಾಲಯಗಳ ಪರಿಸ್ಥಿತಿ ಬಗ್ಗೆ ಕುಲಪತಿಗೆ ವಿವರಿಸಿದ್ದಾರೆ ಎಂದು ಆಯೋಗದ ಸದಸ್ಯರು ಹೇಳಿದ್ದಾರೆ. 
ಆಯೋಗ ಮತ್ತೊಂದು ಸಭೆಯನ್ನು ರಾಜ್ಯಪಾಲರೊಂದಿಗೆ ನಡೆಸಲಿದ್ದು, ಅಲ್ಲಿ ರಾಜ್ಯದ ಎಲ್ಲಾ 25 ವಿಶ್ವವಿದ್ಯಾಲಯಗಳ ಪ್ರತಿನಿಧಿಗಳು ಹಾಜರಿರುತ್ತಾರೆ. ವಿಶ್ವವಿದ್ಯಾಲಯಗಳ ಅನೇಕ ವಿಷಯಗಳ ಕುರಿತು ಚರ್ಚೆ ನಡೆಸಲಿದ್ದಾರೆ ಎಂದರು.
ಮೈಸೂರು ವಿಶ್ವವಿದ್ಯಾಲಯ ಮಾತ್ರ ಪರಾಮರ್ಶೆ ನಡೆಸಲು ಬಾಕಿಯಿದೆ. ಹೊಸ ಉಪ ಕುಲಪತಿ ಅಧಿಕಾರ ವಹಿಸಿಕೊಂಡ ನಂತರ ನಾವು ಭೇಟಿ ನೀಡಿ ಪರಿಶೀಲಿಸುತ್ತೇವೆ ಎಂದು ಆಯೋಗದ ಅಧಿಕಾರಿಗಳು ಹೇಳುತ್ತಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com