ಪಕ್ಷದ ನಿಷ್ಠಾವಂತರ ಕಡೆಗಣನೆ ಸಹಿಸಲ್ಲ; ಸರ್ವಾಧಿಕಾರಿ ಧೋರಣೆ ನಡೆಯಲ್ಲ: ಯಡಿಯೂರಪ್ಪಗೆ ಈಶ್ವರಪ್ಪ ಎಚ್ಚರಿಕೆ

ಕೆಎಸ್ ಈಶ್ವರಪ್ಪ ಯಡಿಯೂರಪ್ಪ ವಿರುದ್ಧ ನೇರಾ ನೇರ ವಾಗ್ದಾಳಿ ನಡೆಸಿದ್ದು, ಯಡಿಯೂರಪ್ಪನವರ ಸರ್ವಾಧಿಕಾರಿ ಧೋರಣೆ ನಡೆಯುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಈಶ್ವರಪ್ಪ-ಯಡಿಯೂರಪ್ಪ
ಈಶ್ವರಪ್ಪ-ಯಡಿಯೂರಪ್ಪ
Updated on: 
ಬೆಂಗಳೂರು: ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ ಉಳಿಸಿ ಸಮಾವೇಶದಲ್ಲಿ ಮಾತನಾಡಿರುವ ವಿಧಾನ ಪರಿಷತ್ ನ ವಿರೋಧ ಪಕ್ಷದ ನಾಯಕ ಕೆಎಸ್ ಈಶ್ವರಪ್ಪ ಯಡಿಯೂರಪ್ಪ ವಿರುದ್ಧ ನೇರಾ ನೇರ ವಾಗ್ದಾಳಿ ನಡೆಸಿದ್ದು, ಯಡಿಯೂರಪ್ಪನವರ ಸರ್ವಾಧಿಕಾರಿ ಧೋರಣೆ ನಡೆಯುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. 
ಯಡಿಯೂರಪ್ಪ ವಿರುದ್ಧ ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನು ನಿರ್ಲಕ್ಷಿಸುತ್ತಿರುವ ಆರೋಪ ಮಾಡಿರುವ ಕೆಎಸ್ ಈಶ್ವರಪ್ಪ, ಪಕ್ಷದ ಪ್ರಾಮಾಣಿಕ ಕಾರ್ಯಕರ್ತರನ್ನು ಅಮಾನತು ಮಾಡುತ್ತೀರಾ? ಯಡಿಯೂರಪ್ಪನವರು ಕಂಡಕಂಡವರನ್ನು ಪದಾಧಿಕಾರಿಗಳನ್ನಾಗಿ ಮಾಡಿದರೆ ನೋಡಿಕೊಂಡು ಸುಮ್ಮನಿರಬೇಕಾ? ಎಂದು ಪ್ರಶ್ನಿಸಿದ್ದಾರೆ. 
ಪಕ್ಷ ಬಿಟ್ಟು ಹೋಗಿ ವಾಪಸ್ ಬಂದವರು ನಮಗೆ ಎಚ್ಚರಿಕೆ ಕೊಡ್ತಾರೆ. ಬಿಜೆಪಿ ಉಳಿಸಿ ಸಮಾವೇಶದಲ್ಲಿ ಭಾಗವಹಿಸಿದರೆ ಹುಷಾರ್ ಎಂದು ಯಡಿಯೂರಪ್ಪನವರು ಎಚ್ಚರಿಕೆ ನೀಡುತ್ತಾರೆ. ಈ ಸಮಾವೇಶದ ಮೂಲಕ ನಾವು ಎಚ್ಚರಿಕೆ ನೀಡುತ್ತಿದ್ದೇವೆ, ಪಕ್ಷದ ನಿಷ್ಠಾವಂತರ ಸುದ್ದಿಗೆ ಬಂದರೆ ಹುಷಾರ್, ಯಡಿಯೂರಪ್ಪನವರ ಸರ್ವಾಧಿಕಾರಿ ಧೋರಣೆ ನಡೆಯುವುದಿಲ್ಲ ಎಂದು ಯಡಿಯೂರಪ್ಪಗೆ ಈಶ್ವರಪ್ಪ ಎಚ್ಚರಿಕೆ ನೀಡಿದ್ದಾರೆ. 
ಮುಂದುವರೆದು ಮಾತನಾಡಿರುವ ಈಶ್ವರಪ್ಪ, ಯಡಿಯೂರಪ್ಪನವರು ನಮ್ಮ ಮುಂದಿನ ಮುಖ್ಯಮಂತ್ರಿ ಎಂದು ನಾವೆಲ್ಲರೂ ಒಪ್ಪಿದ್ದೇವೆ. ಆದರೆ ಪ್ರಾಮಾಣಿಕ ಕಾರ್ಯಕರ್ತರನ್ನು ಅಮಾನತು ಮಾಡಿ ಕಂಡ ಕಂಡವರನ್ನೆಲ್ಲಾ ಪದಾಧಿಕಾರಿಗಳನ್ನಾಗಿ ನೇಮಿಸುವ ಯಡಿಯೂರಪ್ಪನವರ ಸರ್ವಾಧಿಕಾರಿ ಧೋರಣೆಯನ್ನು ಸಹಿಸುವುದಿಲ್ಲ. ಯಡಿಯೂರಪ್ಪನವರ ಸುತ್ತ ಇಂದ್ರ ಚಂದ್ರ ಎಂದು ಹೊಗಳಿ ಅಟ್ಟಕ್ಕೇರಿಸುವವರಿದ್ದಾರೆ. ಅವರ ಮಾತನ್ನು ಕೇಳಿ ಪಕ್ಷಕ್ಕೆ ದ್ರೋಹ  ಮಾಡಿದರೆ ನಾವು ನಿಮಗೆ ಎಚ್ಚರಿಕೆ ಕೊಡುತ್ತೇವೆ ಎಂದಿರುವ ಈಶ್ವರಪ್ಪ, ನಾವು ಅಪ್ಪ-ಅಮ್ಮನಿಗೆ ಹುಟ್ಟಿದವರು, ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವುದಿಲ್ಲ, ಬೇರೆ ಪಕ್ಷ ಕಟ್ಟುವುದಿಲ್ಲ ಪ್ರಾಮಾಣಿಕ ಕಾರ್ಯಕರ್ತರ ಸುದ್ದಿಗೆ ಬಂದರೆ ಹುಷಾರ್ ಎಂದು ಎಚ್ಚರಿಕೆ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com