ಮೇ 4ರಂದು ಮುಷ್ಕರ ಕೈ ಬಿಟ್ಟ ಸರ್ಕಾರಿ ನೌಕರರು

ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ಪಂದಿಸಿರುವುದರಿಂದ ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ಪಂದಿಸಿರುವುದರಿಂದ  ಮೇ 4 ರಂದು ಕರೆ ನೀಡಿದ್ದ ನಿರಶನ ಮತ್ತು ಮುಷ್ಕರವನ್ನು ಕೈಬಿಡಲು ತೀರ್ಮಾನಿಸಲಾಗಿದೆ ಎಂದು ನೌಕರರ ಸಂಘದ ಅಧ್ಯಕ್ಷ ಬಿ.ಪಿ.ಮಂಚೇಗೌಡ ತಿಳಿಸಿದ್ದಾರೆ.
 ಕೇಂದ್ರ ಸರ್ಕಾರಿ ನೌಕರರಿಗೆ ಸಮನಾದ ವೇತನ, ಭತ್ಯೆಗಳನ್ನು ರಾಜ್ಯ ಸರ್ಕಾರಿ ನೌಕರರಿಗೂ ನೀಡುವಂತೆ ಬೇಡಿಕೆ ಸಲ್ಲಿಸಿದ ಹಿನ್ನೆಲೆಯಲ್ಲಿ ಶೇಕಡಾ 30ರಷ್ಟು ಮಧ್ಯಂತರ ಪರಿಹಾರ ಮಂಜೂರಾತಿ ಬಗ್ಗೆ ಆರ್ಥಿಕ ಇಲಾಖೆಯಲ್ಲಿ ಪರಿಶೀಲಿಸಲಾಗುತ್ತಿದೆ. ಈ ಬಗ್ಗೆ ಸದ್ಯದಲ್ಲೇ ಆದೇಶ ಹೊರಬೀಳಲಿದೆ. ಆದರೆ ನಿವೃತ್ತ ನೌಕರರ ಸಂಘವೊಂದು ಪ್ರಚಾರಕ್ಕಾಗಿ ಧರಣಿಗೆ ಕರೆ ನೀಡಿದ್ದು, ಅಪ್ರಸ್ತುತ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com