ನಾಮಫಲಕವಿದ್ದರೂ ಮುಖ್ಯರಸ್ತೆ ಬದಿಯಲ್ಲಿ ಒಳಚರಂಡಿ ವ್ಯವಸ್ಥೆ ಕಲ್ಪಿಸುವುದಕ್ಕಾಗಿ ಕೆಲ ದಿನಗಳಿಂದ ಜಲಮಂಡಳಿಯ ಗುತ್ತಿಗೆದಾರರು ರಸ್ತೆ ಅಗೆಯಲು ಆರಂಭಿಸಿದ್ದರು. ಈ ವೇಳೆ ಗ್ಯಾಸ್ ಪೈಪ್‌ಲೈನ್‌ಗೆ ಹಾನಿಯಾಗಿದ್ದು, ಅದರಿಂದಲೇ ಬೆಂಕಿ ಕಾಣಿಸಿಕೊಂಡಿದೆ ಎಂದು ಸ್ಥಳೀಯರು ದೂರಿದರು. ನಂತರ ಸ್ಥಳಕ್ಕೆ ಬಂದ ಪೊಲೀಸರು, ಸ್ಥಳೀಯರ ನೆರವಿನಿಂದ ಬೆಂಕಿ ನಂದಿಸಿದರು. ಜಲಮಂಡಳಿ ಸಿಬ್ಬಂದಿಯೇ ಸ್ಥಳಕ್ಕೆ ಬಂದು ತಗ್ಗು ಮುಚ್ಚಿದ್ದಾರೆ.