ಇಂಧನ ಸಚಿವ ಡಿ.ಕೆ ಶಿವಕುಮಾರ್ ಗೆ ಸೇರಿದ ಮನೆ ಹಾಗೂ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡಸಿ ಪರಿಶೀಲನೆ ಮುಂದುವರಿಸಿದ್ದು, ಪ್ರತಿಕ್ರಿಯೆ ನೀಡಿರುವ ಐಟಿ ಇಲಾಖೆ ಅಧಿಕಾರಿಗಳು ನಮ್ಮ ದಾಳಿ ಪರಿಶೀಲನೆ ಏನಿದ್ದರೂ ಶಿವಕುಮಾರ್ ಮೇಲೆ ಮಾತ್ರ, ರೆಸಾರ್ಟ್ ಮೇಲಲ್ಲ ಹಾಗೂ ಅಲ್ಲಿ ತಂಗಿರುವ ಗುಜರಾತ್ ಶಾಸಕರಿಗೂ ಇದಕ್ಕೂ ಸಂಬಂಧವಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ. ಈಗಲ್ ಟನ್ ರೆಸಾರ್ಟ್ ನಲ್ಲಿ ಹಣ ಸಿಕ್ಕಿಲ್ಲ, ದೆಹಲಿಯ ಡಿ.ಕೆ ಶಿವಕುಮಾರ್ ನಿವಾಸದಲ್ಲಿ ಮಾತ್ರ ಹಣ ಸಿಕ್ಕಿದೆ ಎಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.