ಸಚಿವ ಡಿಕೆ ಶಿವಕುಮಾರ್ ಮನೆ ಹಾಗೂ ಕಚೇರಿ ಮೇಲೆ ಐಟಿ ರೇಡ್

ಇಂಧನ ಸಚಿವ ಡಿ.ಕೆ ಶಿವಕುಮಾರ್ ಅವರಿಗೆ ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶಾಕ್ ನೀಡಿದ್ದಾರೆ.ಡಿ.ಕೆಶಿ ಸಹೋದರ ಸಂಸದ ಡಿ.ಕೆ ಸುರೇಶ್ ಹಾಗೂ ಬಿಡದಿಯಲ್ಲಿರುವ...
ಡಿ.ಕೆ.ಶಿವಕುಮಾರ್ ನಿವಾಸ
ಡಿ.ಕೆ.ಶಿವಕುಮಾರ್ ನಿವಾಸ
ಬೆಂಗಳೂರು: ಇಂಧನ ಸಚಿವ ಡಿ.ಕೆ ಶಿವಕುಮಾರ್ ಅವರಿಗೆ ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶಾಕ್ ನೀಡಿದ್ದಾರೆ.
ಬೆಂಗಳೂರಿನ ಸದಾಶಿವ ನಗರದಲ್ಲಿರುವ ಡಿ.ಕೆ ಶಿವಕುಮಾರ್ ನಿವಾಸದ ಮೇಲೆ ಇಂದು ಬೆಳಗ್ಗೆ 7 ಗಂಟೆಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. 5 ಇನ್ನೋವಾ ಕಾರುಗಳಲ್ಲಿ ಆಗಮಿಸಿರುವ ಸುಮಾರು 20 ಅಧಿಕಾರಿಗಳು ಡಿಕೆಶಿ ಮನೆ ಹಾಗೂ ಕಚೇರಿಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಡಿ.ಕೆಶಿ ಸಹೋದರ ಸಂಸದ ಡಿ.ಕೆ ಸುರೇಶ್ ಹಾಗೂ ಸಂಬಂಧಿಕರ ಮನೆ ಸೇರಿದಂತೆ ಸುಮಾರು 10 ಕಡೆಗಳಲ್ಲಿ ಐಟಿ ಇಲಾಖೆ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಡಿಕೆಶಿ ನಿವಾಸಕ್ಕೆ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಡಿ.ಕೆ ಶಿವಕುಮಾರ್ ಗೆ ಸೇರಿದ ಕನಕಪುರ ಮನೆಯ ಮೇಲೂ ಪರಿಶೀಲನೆ ನಡೆಸಲಾಗುತ್ತಿದೆ. ಎಂಎಲ್ ಸಿ ಎಸ್. ರವಿ ಮನೆ ಮೇಲೂ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಇದೇ ವೇಳೆ ರಾಮನಗರ ಜಿಲ್ಲೆ ಬಿಡದಿ ತಾಲೂಕಿನಲ್ಲಿರುವ ಈಗಲ್ ಟನ್ ರೆಸಾರ್ಟ್ ಮೇಲೂ ಐಟಿ ದಾಳಿ ನಡೆದಿದೆ. ಕಳೆದ ಕೆಲವು ದಿನಗಳಿಂದ ಗುಜರಾತ್ ನ ಕಾಂಗ್ರೆಸ್ ಶಾಸಕರು ಈಗಲ್ ಟನ್ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಡಿಕೆ ಶಿವಕುಮಾರ್ ಬುಕ್ ಮಾಡಿದ್ದ ರೆಸಾರ್ಟ್ ನ ರೂಂ ಮೇಲೂ ದಾಳಿ ನಡೆಸಿರುವ ಅಧಿಕಾರಿಗಳು, ಒಳಬರುವ ಹಾಗೂ ಹೊರ ಹೋಗುವ ವಾಹನಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com