ಡಿಕೆಶಿ ಮನೆ ಕಾಯುತ್ತಿರುವ ಪೊಲೀಸರಿಗೆ ಸೊಳ್ಳೆಕಾಟ: ಡೆಂಗ್ಯೂ, ಚಿಕನ್ ಗುನ್ಯಾ ಭೀತಿ

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿಯ ಹಿನ್ನೆಲೆಯಲ್ಲಿ ಬೆಂಗಳೂರಿನ ಸದಾಶಿವನಗರದಲ್ಲಿರುವ ಸಚಿವ ಡಿ.ಕೆ ಶಿವಕುಮಾರ್ ಅವರ...
ಡಿ.ಕೆ ಶಿವಕುಮಾರ್ ಮನೆಗೆ ನಿಯೋಜಿಸಲ್ಪಟ್ಟಿರುವ ಪೊಲೀಸ್ ಸಿಬ್ಬಂದಿ
ಡಿ.ಕೆ ಶಿವಕುಮಾರ್ ಮನೆಗೆ ನಿಯೋಜಿಸಲ್ಪಟ್ಟಿರುವ ಪೊಲೀಸ್ ಸಿಬ್ಬಂದಿ
ಬೆಂಗಳೂರು:  ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿಯ ಹಿನ್ನೆಲೆಯಲ್ಲಿ ಬೆಂಗಳೂರಿನ ಸದಾಶಿವನಗರದಲ್ಲಿರುವ ಸಚಿವ ಡಿ.ಕೆ ಶಿವಕುಮಾರ್ ಅವರ ನಿವಾಸವನ್ನು ಕಳೆದ 64 ಗಂಟೆಗಳಿಂದ ಕಾಯುತ್ತಿರುವ ಪೊಲೀಸರಿಗೆ ರಾತ್ರಿ ವೇಳೆ ಸೊಳ್ಳೆಗಳ ಕಾಟ ಆರಂಭವಾಗಿದೆ.
ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿರುವ ಪೊಲೀಸರಿಗೆ ಸೊಳ್ಳೆಗಳು ಕಚ್ಚುತ್ತಿರುವುದರಿಂದ ಡೆಂಗ್ಯೂ, ಚಿಕನ್ ಗುನ್ಯಾ ಬರಬಹುದೆಂದು ಪೊಲೀಸರು ಭಯಗೊಂಡಿದ್ದಾರೆ.
ಐಟಿ ಅಧಿಕಾರಿಗಳು ದಾಳಿ ಆರಂಭಿಸಿದಾಗಿನಿಂದ 18ನೇ ಕ್ರಾಸ್ ನಲ್ಲಿ ಬ್ಯಾರಿಕೇಡ್ ಗಳನ್ನು ಹಾಕಿ ರಸ್ತೆ ಕ್ಲೋಸ್ ಮಾಡಲಾಗಿದೆ, ಇದರಿಂದಾಗಿ ಆ ರಸ್ತೆಯಲ್ಲಿ ಕಸದ ರಾಶಿಯೇ ಬಿದ್ದಿದ್ದು ದುರ್ನಾತ ಬೀರುತ್ತಿದೆ. ಡಾ.ರಾಜ್ ಕುಮಾರ್ ಮನೆಯಿರುವ ರಸ್ತೆ ಸೇರಿದಂತೆ ಶಿವಕುಮಾರ್ ಮನೆಯಿರುವ ರೋಡ್ ಈಗಾಗಲೇ ಪೊಲೀಸರು ಬ್ಲಾಕ್ ಮಾಡಿದ್ದಾರೆ.  ರಸ್ತೆ ಸ್ವಚ್ಛಗೊಳಿಸಲು ಪೌರ ಕಾರ್ಮಿಕರಿಗೆ ಅವಕಾಶ ನೀಡದ ಕಾರಣ ಕಸ ಗಬ್ಬೆದ್ದು ನಾರುತ್ತಿದೆ.
ರಾತ್ರಿ ವೇಳೆ ನಾವು ಮನೆಯ ಹೊರಗೆ ಕಾಯಬೇಕು. ಈ ವೇಳೆ ನಾವು ನಮ್ಮನ್ನು ಸೊಳ್ಳೆಗಳ ಕಾಟದಿಂದ ರಕ್ಷಿಸಿಕೊಳ್ಳಬೇಕಿದೆ. ಎಲ್ಲೆಡೆ, ಚಿಕನ್ ಗುನ್ಯಾ ಮತ್ತು ಡೆಂಗ್ಯು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ನಮಗೆ ಭಯ ಉಂಟಾಗಿದೆ ಎಂದು ಪೊಲೀಸ್ ಸಿಬ್ಬಂದಿಯೊಬ್ಬರು ತಮ್ಮ ಅಳಲು ತೋಡಿಕೊಂಡಿದ್ದಾರೆ.
ಶಿವಕುಮಾರ್ ಮನೆಯ ಸದಸ್ಯರು ಹಾಗೂ ಐಟಿ ಅಧಿಕಾರಿಗಳು ಹಾಗೂ ಸಿಆರ್ ಪಿಎಫ್ ಸಿಬ್ಬಂದಿ ಮನೆಯ ಒಳಗಿದ್ದಾರೆ. ಆದರೆ ನಮ್ಮ ಬಗ್ಗೆ ಯಾರು ಗಮನ ಹರಿಸುತ್ತಿಲ್ಲ. ಸೊಳ್ಳೆಯಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳಲಾಗುತ್ತಿಲ್ಲ ಎಂದು ಮತ್ತೊಬ್ಬ ಪೊಲೀಸ್ ಸಿಬ್ಬಂದಿ ಬೇಸರ ವ್ಯಕ್ತ ಪಡಿಸಿದ್ದಾರೆ.
ಈ ರಸ್ತೆಯಲ್ಲಿ ಅನೇಕ ಮರಗಳಿವೆ, ಜೊತೆಗೆ ತುಂತುರು ಮಳೆಯ ಕಾರಣ ಸೊಳ್ಳೆಗಳ ಸಂಖ್ಯೆ ಹೆಚ್ಚಾಗಿದೆ ಎಂದು ಹೇಳಿದ್ದಾರೆ.
ಕಸ ಸ್ವಚ್ಚಗೊಳಿಸದಿರುವುದು ನನ್ನ ಗಮನಕ್ಕೆ ಬಂದಿದೆ, ಈ ವಿಷಯವಾಗಿ ನಾನು ಯಾವುದೇ ಪ್ರತಿಕ್ರಿಯೆ ನೀಡಲಾರೆ, ಶನಿವಾರ ಬೆಳಗ್ಗೆ ಸ್ವಚ್ಛಗೊಳಿಸಿ ಫಾಗಿಂಗ್ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಮೇಯರ್ ಪದ್ಮಾವತಿ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com