ಶಿವಮೊಗ್ಗ: ಶಿವಮೊಗ್ಗದ ಸಾಗರ ತಾಲೂಕಿನ ಆಚಾಪುರದ ಬಳಿ ಬಸ್ ಮತ್ತು ಆಟೋ ನಡುವೆ ಭೀಕರ ಅಪಘಾತ ಸಂಭವಿಸಿದ್ದು ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. .ಇಂದು ಬೆಳಗ್ಗೆ ಈ ಅಪಘಾತ ಸಂಭವಿಸಿದ್ದು ಬಸ್ ಡಿಕ್ಕಿಯ ರಭಸಕ್ಕೆ ಆಟೋ ನುಜ್ಜು-ಗುಜ್ಜಾಗಿದೆ. ಇನ್ನು ಅಪಘಾತದಲ್ಲಿ ನಾಲ್ವರು ಸಾವನಪ್ಪಿದ್ದು ಇಬ್ಬರ ಸ್ಥಿತಿ ಗಂಭೀರವಾಗಿದೆ. .ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ..Follow KannadaPrabha channel on WhatsApp Subscribe to KannadaPrabha YouTube Channel and watch Videos Download the KannadaPrabha News app to follow the latest news updates Subscribe and Receive exclusive content and updates on your favorite topics