ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರದಲ್ಲಿ ಸರ್ಕಾರದ ನಿಲುವು ಯಾವುದು ಇಲ್ಲ: ಸಿಎಂ

ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರದಲ್ಲಿ ಸಮುದಾಯದ ನಾಯಕರಲ್ಲೇ ಭಿನ್ನಾಭಿಪ್ರಾಯ ಭುಗಿಲೆದ್ದಿದ್ದು,...
ಸಿದ್ದರಾಮಯ್ಯ
ಸಿದ್ದರಾಮಯ್ಯ
ಚಾಮರಾಜನಗರ: ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರದಲ್ಲಿ ಸಮುದಾಯದ ನಾಯಕರಲ್ಲೇ ಭಿನ್ನಾಭಿಪ್ರಾಯ ಭುಗಿಲೆದ್ದಿದ್ದು, ಈ ವಿಚಾರದಲ್ಲಿ ಸರ್ಕಾರದ ನಿಲುವು ಯಾವುದು ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮದ ವಿವಾದ ನಾನು ಹುಟ್ಟು ಹಾಕಿದ್ದಲ್ಲ. ಆದರೆ ಈ ವಿವಾದ ನಾನು ಹುಟ್ಟಾಕಿದ್ದು ಎಂದು ಬಿಂಬಿಸಲಾಗುತ್ತಿದೆ ಎಂದರು.
ವೀರಶೈವ ಮಹಾಸಭದ ಕಾರ್ಯಕ್ರಮದಲ್ಲಿ ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಬೇಡಿಕೆ ಇಟ್ಟಿದ್ದರು. ಎಲ್ಲರೂ ಒಗ್ಗಟ್ಟಾಗಿ ಮನವಿ ಸಲ್ಲಿಸಿದರೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವುದಾಗಿ ಹೇಳಿದ್ದೆ ಅಷ್ಟೆ. ಇದರಲ್ಲಿ ನನ್ನ ಪಾತ್ರ ಮತ್ತು ನಿಲುವು ಇಲ್ಲ. ಈ ಸಂಬಂಧ ಮಾತೆ ಮಹಾದೇವಿ ಮತ್ತು ಶಾಮನೂರು ಶಿವಶಂಕಪ್ಪ ಅವರು ಪತ್ರ ಬರೆದಿದ್ದರು ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.
ಇದೇ ವೇಳೆ ತಮಿಳುನಾಡಿಗೆ ನೀರು ಹರಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಕಾವೇರಿ ನ್ಯಾಯಾಧೀಕರಣದ ಆದೇಶದ ಪ್ರಕಾರ ನೀರು ಬಿಟ್ಟಿದ್ದೇವೆ. ನಮ್ಮ ರೈತರಿಗೂ ಅದೇ ರೀತಿ ಇಂದಿನಿಂದ ನೀರು ಬಿಡಲಾಗುತ್ತಿದೆ. ತಮಿಳುನಾಡಿಗೆ ನೀರು ಬಿಡದಿದ್ದರೆ ನ್ಯಾಯಾಂಗ ನಿಂದನೆಯಾಗುತ್ತದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com