ಶ್ರೀಗಳ ಮುಂದೆ ಕಾಲ ಮೇಲೆ ಕಾಲು ಹಾಕಿ ಕುಳಿತ ಅಮಿತ್ ಶಾ, ಫೋಟೋ ವೈರಲ್

ರಾಜ್ಯ ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಆದಿ ಚುಂಚನಗಿರಿ ಮಠಕ್ಕೆ ಭೇಟಿ ನೀಡಿ ನಿರ್ಮಾಲಾನಂದ ಶ್ರೀಗಳನ್ನು ಭೇಟಿಯಾಗಿದ್ದರು...
ನಿರ್ಮಾಲನಂದ ಶ್ರೀಗಳ ಮುಂದೆ ಕಾಲ ಮೇಲೆ ಕಾಲು ಹಾಕಿ ಕುಳಿತಿರುವ ಅಮಿತ್ ಶಾ
ನಿರ್ಮಾಲನಂದ ಶ್ರೀಗಳ ಮುಂದೆ ಕಾಲ ಮೇಲೆ ಕಾಲು ಹಾಕಿ ಕುಳಿತಿರುವ ಅಮಿತ್ ಶಾ
Updated on
ಮಂಡ್ಯ: ರಾಜ್ಯ ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಆದಿ ಚುಂಚನಗಿರಿ ಮಠಕ್ಕೆ ಭೇಟಿ ನೀಡಿ ನಿರ್ಮಾಲಾನಂದ ಶ್ರೀಗಳನ್ನು ಭೇಟಿಯಾಗಿದ್ದರು. ಈ ವೇಳೆ ಶ್ರೀಗಳ ಮುಂದೆ ಕಾಲ ಮೇಲೆ ಕಾಲು ಹಾಕಿ ಕುಳಿತು ಫೋಟೋಗೆ ಪೋಸ್ ನೀಡಿದ್ದಾರೆ. ಈ ಫೋಟೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಅಮಿತ್ ಶಾ ವರ್ತನೆ ಕುರಿತು ಆಕ್ರೋಶ ವ್ಯಕ್ತವಾಗಿದೆ. 
ಶ್ರೀಗಳ ಮುಂದೆ ಕಾಲ ಮೇಲೆ ಕಾಲು ಕುಳಿತು ಸ್ವಾಮೀಜಿಗೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಫೇಸ್ ಬುಕ್ ಮತ್ತು ವ್ಯಾಟ್ಸ್ ಆಪ್ ನಲ್ಲಿ ಆಕ್ರೋಶ ವ್ಯಕ್ತವಾಗಿದೆ. 
ನಿರ್ಮಾಲಾನಂದ ಶ್ರೀಗಳು ಶೂದ್ರ ಸ್ವಾಮೀಜಿ ಆಗಿರುವ ಕಾರಣದಿಂದ ಈ ರೀತಿ ವರ್ತಿಸಿದ್ದಾರೆ. ಅದೇ ಬ್ರಾಹ್ಮಣ ಅಥವಾ ಇನ್ನಿತರೆ ಮೇಲ್ಜಾತಿಗೆ ಸೇರಿದ ಸ್ವಾಮೀಜಿಯವರನ್ನು ಭೇಟಿ ಮಾಡಿದಾಗ ಈ ರೀತಿ ವರ್ತಿಸುತ್ತಿದ್ದರೆ ಎಂದು ನೆಟ್ಟಿಗರು ಜಾಲತಾಣಗಳಲ್ಲಿ ಪ್ರಶ್ನಿಸಿದ್ದಾರೆ. 
ಇನ್ನು ಈ ಕುರಿತಂತೆ ಮಾಜಿ ಸಂಸದೆ ಹಾಗೂ ಕಾಂಗ್ರೆಸ್ ನಾಯಕಿ ರಮ್ಯಾ ಕೂಡು ತಮ್ಮ ಫೇಸ್ ಬುಕ್ ನಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರೇ ಶ್ರೀಗಳ ಮುಂದೆ ಕಾಲಿನ ಮೇಲೆ ಕಾಲು ಹಾಕಿಕೊಂಡು ಕುಳಿತುಕೊಳ್ಳುವುದು ನಿಮ್ಮ ಸಂಸ್ಕೃತಿಯೇ? ಎಂದು ಬರೆದು ಪೋಟೋ ಶೇರ್ ಮಾಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com