ಅಮಿತ್ ಶಾ ಬೆಂಗಳೂರಿನಿಂದ ತೆರಳಿದ ನಂತರ ಪ್ರತಿಭಟನೆಗೆ ರಾಜ್ಯ ಬಿಜೆಪಿ ಸಜ್ಜಾಗಿದೆ. ಈ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆ(ಐಟಿ) ದಾಳಿಯ ವೇಳೆ ಅಪಾರ ಪ್ರಮಾಣದ ಅಘೋಷಿತ ಆಸ್ತಿ ಪತ್ತೆಯಾಗಿರುವ ಸಚಿವ ಡಿ.ಕೆ.ಶಿವಕುಮಾರ್, ರಮೇಶ ಜಾರಕಿಹೊಳಿ ಅವರು ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು, ಅವರು ರಾಜೀನಾಮೆ ನೀಡದೇ ಇದ್ದರೆ ಅವರಿಬ್ಬರನ್ನು ಸಂಪುಟದಿಂದ ಕೈಬಿಡಬೇಕು ಎಂದು ಆಗ್ರಹಿಸಿ ಶುಕ್ರವಾರದಿಂದ ಒಂದು ವಾರ ಹೋರಾಟ ನಡೆಸಲಾಗುವುದು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.