ರಾಜ್ಯದಲ್ಲಿ ಸ್ಥಳೀಯ ಭಾಷೆಗೆ ಮೊದಲ ಆದ್ಯತೆ: ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಸ್ಥಳೀಯ ಭಾಷೆಗೆ ಮೊದಲ ಆದ್ಯತೆ ಸಿಗಬೇಕು ಮತ್ತು ಇತರೆ ಭಾಷೆಯನ್ನು ನಮ್ಮ ಹೇರುವುದನ್ನು ಒಪ್ಪಿಕೊಳ್ಳಲು....
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on
ಬೆಂಗಳೂರು: ರಾಜ್ಯದಲ್ಲಿ ಸ್ಥಳೀಯ ಭಾಷೆಗೆ ಮೊದಲ ಆದ್ಯತೆ ಸಿಗಬೇಕು ಮತ್ತು ಇತರೆ ಭಾಷೆಯನ್ನು ನಮ್ಮ ಹೇರುವುದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ.
70ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ ಇಂದು ನಗರದ ಮಾಣಿಕ್ ಷಾ ಪೆರೆಡ್​ ಮೈದಾನದಲ್ಲಿ ನಡೆದ ಧ್ವಜಾರೋಹಣ ಮಾಡಿ ಮಾತನಾಡಿದ ಸಿಎಂ, ರಾಜ್ಯದಲ್ಲಿ ಪ್ರಾದೇಶಿಕ ಭಾಷೆಗೆ ಮೊದಲ ಆದ್ಯತೆ ಕೊಡಬೇಕು. ಇತರೆ ಭಾಷೆಗಳಿಗೆ ನಂತರ ಸ್ಥಾನ ನೀಡಬೇಕು ಎಂದಿದ್ದಾರೆ.
ರಾಜ್ಯದಲ್ಲಿ ಕನ್ನಡ ಅಧಿಕೃತ ಭಾಷೆಯಾಗಿರುವಾಗ ಇತರೆ ಭಾಷೆಯನ್ನು ನಮ್ಮ ಮೇಲೆ ಬಲವಂತವಾಗಿ ಹೇರುವುದ ಅಸಂವಿಧಾನಿಕ ಎಂದು ಸಿಎಂ ಹೇಳಿದ್ದಾರೆ.
ನಮ್ಮ ಮೆಟ್ರೊದಲ್ಲಿ ಕೇಂದ್ರ ಸರ್ಕಾರ ಹಿಂದಿ ಹೇರುತ್ತಿರುವುದನ್ನು ವಿರೋಧಿಸಿದ್ದ ಸಿದ್ದರಾಮಯ್ಯ ಅವರು, ಬಿಎಂಆರ್ ಸಿಎಲ್ ಅಧಿಕಾರಿಗಳಿಗೆ ಪತ್ರ ಬರೆದು ಮೆಟ್ರೊ ನಿಲ್ದಾಣಗಳಲ್ಲಿರುವ ಹಿಂದಿ ಬೊರ್ಡ್ ಗಳನ್ನು ತೆರವುಗೊಳಿಸುವಂತೆ ಸೂಚಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com