ಇಂದಿರಾ ಕ್ಯಾಂಟೀನ್: ಹಸಿವಿನ ವಿರುದ್ಧದ ನಮ್ಮ ಹೋರಾಟಕ್ಕಿದು ಐತಿಹಾಸಿಕ ದಿನ- ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯ ಇಂದಿರಾ ಕ್ಯಾಂಟೀನ್ ಚಾಲನೆಗೆ ಕ್ಷಣಗಣನೆ ಆರಂಭವಾಗಿದ್ದು, ಹಸಿವು ಹಾಗೂ ಅಪೌಷ್ಟಿಕತೆಯ ವಿರುದ್ಧದ ನಮ್ಮ ಹೋರಾಟಕ್ಕೆ...
ಮುಖ್ಯಮಂತ್ರಿ ಸಿದ್ದರಾಮಯ್ಯ (ಸಂಗ್ರಹ ಚಿತ್ರ)
ಮುಖ್ಯಮಂತ್ರಿ ಸಿದ್ದರಾಮಯ್ಯ (ಸಂಗ್ರಹ ಚಿತ್ರ)

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯ ಇಂದಿರಾ ಕ್ಯಾಂಟೀನ್ ಚಾಲನೆಗೆ ಕ್ಷಣಗಣನೆ ಆರಂಭವಾಗಿದ್ದು, ಹಸಿವು ಹಾಗೂ ಅಪೌಷ್ಟಿಕತೆಯ ವಿರುದ್ಧದ ನಮ್ಮ ಹೋರಾಟಕ್ಕಿದೊಂದು ಐತಿಹಾಸಿಕ ದಿನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ. 

ಇಂದಿರಾ ಕ್ಯಾಂಟೀನ್ ಯೋಜನೆಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಚಾಲನೆ ನೀಡುತ್ತಿದ್ದು, ಬೆಂಗಳೂರಿನ ಎಲ್ಲ ಒಟ್ಟು 198 ವಾರ್ಡ್ ಗಳಲ್ಲಿ ವಾರ್ಡ್ ಗೆ ಒಂದರಂತೆ ಒಂದೊಂದು ಇಂದಿರಾ ಕ್ಯಾಂಟೀನ್ ಆರಂಭಿಸಲು ಯೋಜನೆ ರೂಪಿಸಲಾಗಿದೆ. ಇದರ ಮೊದಲ ಭಾಗವಾಗಿ ಇಂದು 101 ಕ್ಯಾಂಟೀನ್ ಗಳಿಗೆ ಇಂದು ಚಾಲನೆ  ನೀಡಲಾಗುತ್ತಿದೆ.

ಈ ಹಿನ್ನಲೆಯಲ್ಲಿ ಯೋಜನೆ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕರ್ನಾಟಕ ರಾಜ್ಯಕ್ಕಿಂದು ಐತಿಹಾಸಿಕ ದಿನವಾಗಲಿದೆ. ಹಸಿವು ಹಾಗೂ ಅಪೌಷ್ಟಿಕತೆಯ ವಿರುದ್ಧ ನಮ್ಮ ಹೋರಾಟದ ಪ್ರತೀಕವಾಗಿರುವ ಇಂದಿರಾ ಕ್ಯಾಂಟೀನ್ ಗೆ ಬೆಂಗಳೂರಿನಾದ್ಯಂತ ಚಾಲನೆ ದೊರೆಯಲಿದೆ ಎಂದು ಹೇಳಿದ್ದಾರೆ. 

ಹಸಿವು ಮುಕ್ತಗೊಳಿಸಲು ಇಂದಿರಾ ಕ್ಯಾಂಟೀನ್ ಮಹತ್ವದ ಪಾತ್ರವಹಿಸಲಿದೆ. ವಿಶೇಷವಾಗಿ ನಗರದ ಕಾರ್ಮಿಕ ವರ್ಗದ ಜನರಿಗೆ ಹಾಗೂ ವಲಸೆ ಕಾರ್ಮಿಕರಿಗೆ ಸಹಾಯಕವಾಗಲಿದೆ ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com