ರಾಜ್ಯ

ಟ್ವಿಟರ್ ನಲ್ಲಿ ಖಾಸಗಿ ಖಾತೆ ಪ್ರಾರಂಭಿಸಿದ ಸಿಎಂ ಸಿದ್ದರಾಮಯ್ಯ

ಈ ವರೆಗೂ ಮುಖ್ಯಮಂತ್ರಿಗಳ ಅಧಿಕೃತ ಟ್ವಿಟರ್ ಖಾತೆಯಿಂದಲೇ ಆಡಳಿತಕ್ಕೆ ಹೊರತಾದ ವಿಷಯಗಳನ್ನು ಟ್ವೀಟ್ ಮಾಡುತ್ತಿದ್ದ ಸಿಎಂ ಸಿದ್ದರಾಮಯ್ಯ ಈಗ ಟ್ವಿಟರ್ ನಲ್ಲಿ ತಮ್ಮ ಖಾಸಗಿ ಖಾತೆಗೆ ಚಾಲನೆ ನೀಡಿದ್ದಾರೆ.

ಟ್ವಿಟರ್ ನಲ್ಲಿ ಖಾಸಗಿ ಖಾತೆ ಪ್ರಾರಂಭಿಸಿದ ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Published On :
ಬೆಂಗಳೂರು: ಈ ವರೆಗೂ ಮುಖ್ಯಮಂತ್ರಿಗಳ ಅಧಿಕೃತ ಟ್ವಿಟರ್ ಖಾತೆಯಿಂದಲೇ ಆಡಳಿತಕ್ಕೆ ಹೊರತಾದ ವಿಷಯಗಳನ್ನು ಟ್ವೀಟ್ ಮಾಡುತ್ತಿದ್ದ ಸಿಎಂ ಸಿದ್ದರಾಮಯ್ಯ ಈಗ ಟ್ವಿಟರ್ ನಲ್ಲಿ ತಮ್ಮ ಖಾಸಗಿ ಖಾತೆಗೆ ಚಾಲನೆ ನೀಡಿದ್ದಾರೆ. 
ಮುಖ್ಯಮಂತ್ರಿಯ ಹೊರತಾಗಿ ಓರ್ವ ಹೆಮ್ಮೆಯ ಕನ್ನಡಿಗನಾಗಿ ಜನರೊಂದಿಗೆ ಸಂಪರ್ಕ ಸಾಧಿಸಲು ಖಾಸಗಿ ಖಾತೆಯನ್ನು ಪ್ರಾರಂಭಿಸಿರುವುದಾಗಿ ಸಿಎಂ ಟ್ವೀಟ್ ಖಾತೆಯಲ್ಲಿ ತಿಳಿಸಿದ್ದಾರೆ. " ಇಂದು ಟ್ವಿಟರ್ ನಲ್ಲಿ ನನ್ನ ಖಾಸಗಿ ಖಾತೆಗೆ ಚಾಲನೆ ನೀಡುತ್ತಿದ್ದೇನೆ, ನಿಮ್ಮ ಅಭಿಪ್ರಾಯಗಳು, ನಿಲುವುಗಳನ್ನು ಹಂಚಿಕೊಳ್ಳಬಹುದು ಎಂದು ಸಿಎಂ ಟ್ವೀಟ್ ಮಾಡಿದ್ದಾರೆ. 
ಸಿದ್ದರಾಮಯ್ಯ ಅವರ ಖಾಸಗಿ ಟ್ವೀಟ್ ಖಾತೆಗೆ ಈಗಾಗಲೇ 2,480 ಕ್ಕೂ ಹೆಚ್ಚು ಜನರು ಅನುಯಾಯಿಗಳಿದ್ದಾರೆ. ಮುಖ್ಯಮಂತ್ರಿಗಳ ಅಧಿಕೃತ ಟ್ವೀಟ್ ಖಾತೆಗೆ 232 ಅನುಯಾಯಿಗಳಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.