ಮತ್ತೆ ಬೆಳ್ಳಂದೂರು ಕೆರೆಯಲ್ಲಿ ನೊರೆ: ಉನ್ನತ ಅಧಿಕಾರಿಗಳಿಗೆ ಎನ್ ಜಿಟಿ ನೊಟೀಸ್

ಬೆಳ್ಳಂದೂರು ಕೆರೆಯಲ್ಲಿ ಮತ್ತೆ ನೊರೆ ಸಮಸ್ಯೆ ಪರಿಹಾರಕ್ಕೆ ಏನು ಕ್ರಮ ಕೈಗೊಂಡಿದ್ದೀರಾ ಹಾಗೂ ಕೆರೆಯನ್ನು ಸ್ವಚ್ಛಗೊಳಿಸಲು ಅನುಸರಿಸಿರುವ ಕ್ರಮಗಳ...
ಬೆಳ್ಳಂದೂರು ಕೆರೆಯಲ್ಲಿ ನೊರೆ
ಬೆಳ್ಳಂದೂರು ಕೆರೆಯಲ್ಲಿ ನೊರೆ
ನವದೆಹಲಿ: ಬೆಳ್ಳಂದೂರು ಕೆರೆಯಲ್ಲಿ ಮತ್ತೆ ನೊರೆ ಸಮಸ್ಯೆ  ಪರಿಹಾರಕ್ಕೆ ಏನು ಕ್ರಮ ಕೈಗೊಂಡಿದ್ದೀರಾ ಹಾಗೂ ಕೆರೆಯನ್ನು ಸ್ವಚ್ಛಗೊಳಿಸಲು ಅನುಸರಿಸಿರುವ ಕ್ರಮಗಳ ಬಗ್ಗೆ ವಿವರಣೆ ಕೋರ ರಾಷ್ಟ್ರೀಯ ಹಸಿರು ಮಂಡಳಿ ರಾಜ್ಯದ ಉನ್ನತ ಅಧಿಕಾರಿಗಳಿಗೆ  ಸಮನ್ಸ್ ನೀಡಿದೆ.
ಎನ್ ಜಿಟಿ ಅಧ್ಯಕ್ಷ ಸ್ವತಂತ್ರ್ಯ ಕುಮಾರ್ ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಕಾರ್ಯದರ್ಶಿಮತ್ತು ಕೆರೆ ಅಭಿವೃದ್ಧಿ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸಮನ್ಸ್ ನೀಡಿದ್ದು, ಆಗಸ್ಟ್ 22 ರ ಒಳಗೆ ವಿವರಣೆ ನೀಡುವಂತೆ ಸೂಚಿಸಿದೆ.
ಇತ್ತೀಚೆಗೆ ಮತ್ತೆ ಬೆಳ್ಳಂದೂರು ಕೆರೆಯಲ್ಲಿ ನೊರೆ ಕಾಣಿಸಿಕೊಂಡ ಸಂಬಂಧ ವಿಚಾರಣೆ ವೇಳೆ ಎನ್ ಜಿ ಟಿ ನೊಟೀಸ್ ನೀಡಿದೆ. 
ಕಳೆದ ವಾರ ಬಿದ್ದ ಭಾರಿ ಮಳೆಯಿಂದಾಗಿ ಬೆಳ್ಳಂದೂರು ಕೆರೆಯಲ್ಲಿ ಈಗಲೂ ನೊರೆ ಕಾಣಿಸಿಕೊಂಡಿದ್ದು, ಜನರಿಗೆ ಕಿರಿಕಿರಿ ಉಂಟು ಮಾಡುತ್ತಿದೆ ಎಂದು ಸ್ಥಳೀಯ ನಿವಾಸಿಗಳು ದೂರಿದ್ದರು.
ಮುಂದಿನ ವಿಚಾರಣೆ ವೇಳೆ ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಕಾರ್ಯದರ್ಶಿಮತ್ತು ಕೆರೆ ಅಭಿವೃದ್ಧಿ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಜರಾಗಬೇಕೆಂದು ಸೂಚಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com