ಬೆಂಗಳೂರು: ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಹತ್ತು ಸಾವಿರ ಶಾಲಾ ಶಿಕ್ಷಕರ ನೇಮಕಕ್ಕೆ ಶೀಘ್ರದಲ್ಲಿ ಅಧಿಸೂಚನೆ ಹೊರಡಿಸಲಿದೆ .ಈ ಬಾರಿ ಜಿಲ್ಲಾ ಮಟ್ಟದ ಸಂಯುಕ್ತ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನೇಮಕಾತಿ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.
ಈ ಬಾರಿ ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು. ಇಲಾಖೆಯ ಅಧಿಕೃತ ವೆಬ್‌ಸೈಟ್ ನಲ್ಲಿ http://schooleducation.kar.nic.in ಅರ್ಜಿ ಲಭ್ಯವಾಗಲಿದೆ.
ಒಂದಕ್ಕಿಂತ ಹಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಪರೀಕ್ಷಾ ಶುಲ್ಕವನ್ನು ಪ್ರತ್ಯೇಕವಾಗಿ ಕಟ್ಟಬೇಕು.
ಈ ಮೇಲೆ ಹೇಳಿದ ವೆಬ್ ಸೈಟ್ ನಲ್ಲಿ ಇದಕ್ಕೆ ಸಂಬಂಧಿಸಿ ಹೆಚ್ಚಿನ ಮಾಹಿತಿಯು ಶೀಘ್ರದಲ್ಲಿಯೇ ದೊರೆಯಲಿದೆ.