ಅಕ್ರಮ ಡಿನೋಟಿಫಿಕೇಷನ್ ಪ್ರಕರಣ: ಎಸಿಬಿಯಿಂದ ಬಿಎಸ್ ವೈಗೆ ತಾತ್ಕಾಲಿಕ ರಿಲೀಫ್

ಡಾ. ಶಿವರಾಮಕಾರಂತ ಬಡಾವಣೆ ಡಿನೋಟಿಫೈ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಬಿಎಸ್‌ವೈಗೆ ನೀಡಿದ್ದ ನೋಟಿಸ್​ನ್ನು ಎಸಿಬಿ ಹಿಂಪಡೆದಿದೆ. ಈ ಮೂಲಕ ...
ಯಡಿಯೂರಪ್ಪ
ಯಡಿಯೂರಪ್ಪ
ಬೆಂಗಳೂರು: ಡಾ. ಶಿವರಾಮಕಾರಂತ ಬಡಾವಣೆ ಡಿನೋಟಿಫೈ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಬಿಎಸ್‌ವೈಗೆ ನೀಡಿದ್ದ ನೋಟಿಸ್​ನ್ನು ಎಸಿಬಿ ಹಿಂಪಡೆದಿದೆ. ಈ ಮೂಲಕ ಬಂಧನ ಭೀತಿಯಲ್ಲಿದ್ದ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.
ಶಿವರಾಮಕಾರಂತ ಬಡಾವಣೆ ಡಿನೋಟಿಫೈ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಗುರುವಾರದೊಳಗೆ ಹಾಜರಾಗುವಂತೆ ಎಸಿಬಿ ನೋಟಿಸ್​ನೀಡಿತ್ತು. ಆದರೆ ಹೈಕೋರ್ಟ್ ಏಕಸದಸ್ಯ ಪೀಠ ಮುಂದಿನ ವಿಚಾರಣೆವರೆಗೂ ಬಂಧಿಸದಂತೆ ಎಸಿಬಿಗೆ ಸೂಚನೆ ನೀಡಿದ ಹಿನ್ನಲೆಯಲ್ಲಿ ನೋಟಿಸ್​ವಾಪಸ್ ಪಡೆದಿದೆ.
ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್ ಆಗಸ್ಟ್ 28ಕ್ಕೆ ಮುಂದೂಡಲಾಗಿದೆ. ವಿಚಾರಣೆ ಮುಂದೂಡಿ ನ್ಯಾ.ಅರವಿಂದ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಯಥಾಸ್ಥಿತಿ ಕಾಪಾಡುವಂತೆ ಎಸಿಬಿಗೆ ಸೂಚನೆ ನೀಡಿದ್ದಾರೆ.
ಶಿವರಾಮ ಕಾರಂತ ಬಡಾವಣೆ ಡಿನೋಟಿಫಿಕೇಶನ್ ಪ್ರಕರಣ ಕುರಿತಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಎರಡು ಪ್ರತ್ಯೇಕ ಎಫ್ ಐಆರ್ ದಾಖಲಿಸಿರುವ ಭ್ರಷ್ಟಾಚಾರ ನಿಗ್ರಹ ದಳಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿತ್ತು. ತಮ್ಮ ಮೇಲಿನ ಎಫ್ಐ ಆರ್  ವಜಾ ಗೊಳಿಸಬೇಕೆಂದು ಕೋರಿ ಬಿಎಸ್ ವೈ ಹೈಕೋರ್ಟ್ ಮೊರೆ ಹೋಗಿದ್ದರು.
ಬಿ,ಎಸ್ ಯಡಿಯೂರಪ್ಪ ವಿರುದ್ಧ ಎಫ್ಐಆರ್ ದಾಖಲಾಗಿದ್ದ ಹಿನ್ನೆಲೆಯಲ್ಲಿ ಎಸಿಬಿ ಮತ್ತು ದೂರದಾರನಿಗೆ ಹೈಕೋರ್ಟ್ ನೊಟೀಸ್ ಜಾರಿ ಮಾಡಿತ್ತು.
ಡಾ.ಶಿವರಾಮ ಕಾರಂತ ಬಡಾವಣೆಯ 257 ಎಕರೆ ಭೂಮಿ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಯಡಿಯೂರಪ್ಪ ವಿರುದ್ಧ ದೂರು ದಾಖಲಾಗಿತ್ತು. ದೂರಿನ ಅನ್ವಯ ಎಸಿಬಿ ಅಧಿಕಾರಿಗಳು ಎಫ್ ಐ ಆರ್ ದಾಖಲಿಸಿದ್ದರು. ಯಡಿಯೂರಪ್ಪ ಸಿಎಂ ಆಗಿದ್ದ ವೇಳೆಯಲ್ಲಿ 20 ವಿವಿಧ ಆದೇಶಗಳನ್ನು ಹೊರಡಿಸಿ 250 ಎಕರೆ ಜಮೀನು ಡಿನೋಟಿಫಿಕೇಶನ್ ಗೆ ಆದೇಶಿಸಿದ್ದರು ಎಂದು ಡಾ.ಅಯ್ಯಪ್ಪ ದೂರು ಸಲ್ಲಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com