ರಾಮನಗರ: ಕೆಎಸ್ಆರ್ಟಿಸಿ ಬಸ್ ಮತ್ತು ಓಮಿನಿ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ರಾಮನಗರದಲ್ಲಿ ನಡೆದಿದೆ.
ರಾಮನಗರದ ಕನಕಪುರ ತಾಲೂಕಿನ ಸಾಸಲಪುರದ ರಾಯರದೊಡ್ಡಿ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು ಸ್ಥಳದಲ್ಲೇ ಕಾರಿನ ಚಾಲಕ ಮತ್ತು ಇಬ್ಬರು ಮಹಿಳೆಯರು ಸೇರಿ ಮೂವರು ಸಾವನ್ನಪ್ಪಿದ್ದಾರೆ. ಇನ್ನು ಕಾರಿನಲ್ಲಿದ್ದ ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸಾತನೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದ್ದು ಪ್ರಕರಣ ದಾಖಲಾಗಿದೆ.