ಆಗಸ್ಟ್ 17 ರಂದು ನಾಲ್ಕು ವರ್ಷದ ಬಾಲಕಿ ಮೇಲೆ ಸಾಕು ತಂದೆ ಅತ್ಯಾಚಾರವೆಸಗಿದ್ದ. ಆನಂತರ ತೀವ್ರ ರಕ್ತಸ್ರಾವವಾಗುತ್ತಿದ್ದ ಹಿನ್ನೆಲೆಯಲ್ಲಿ ಬಾಲಕಿಯನ್ನು ಸೇಂಟ್ ಜಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಬೆಳಗಿನ ಜಾವ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಈ ಸಂಬಂಧ ತಲಘಟ್ಟಪುರ ಠಾಣೆಯಲ್ಲಿ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗಿದೆ.