
ಕೋಲಾರ: ಬಂಗಾರಪೇಟೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಸಿಬ್ಬಂದಿಯೋರ್ವ 10 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದು, ಪ್ರಕರಣ ಸಂಬಂಧ ಬಂಗಾರಪೇಟೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಮೂಲಗಳ ಪ್ರಕಾರ ಹಾಸ್ಟೆಲ್ ನಲ್ಲಿ ಅಡುಗೆ ಮಾಡಿಕೊಂಡಿದ್ದ ಐವತ್ತೈದು ವರ್ಷದ ನಾರಾಯಣಪ್ಪ ಎಂಬಾತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದು, ಈ ಬಗ್ಗೆ ಪೋಷಕರು ಜಿಲ್ಲಾ ಪಂಚಾಯಿತಿ ಸಿಇಒ ಕಾವೇರಿ ಅವರಿಗೆ ದೂರು ನೀಡಿದ್ದಾರೆ. ಇಒ ನೀಡಿದ ಮಾಹಿತಿ ಮೇರೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಪ್ರಭಾರಿ ಉಪನಿರ್ದೇಶಕಿ ಸೌಮ್ಯ ಅವರು ಬಾಲಕಿಯನ್ನು ರಕ್ಷಿಸಿ ಕೋಲಾರದ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.
ಇನ್ನು ಅಡುಗೆ ಭಟ್ಟ ನಾರಾಯಣಪ್ಪನ ವಿರುದ್ದ ಪೋಕ್ಸೋ ಕಾಯಿದೆಯಡಿ ಬಂಗಾರಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆತ ಪ್ರಕರಣ ಬೆಳಕಿಗೆ ಬಂದ ಬಳಿಕ ಪರಾರಿಯಾಗಿದ್ದಾನೆ. ಪ್ರಕರಣ ಸಂಬಂಧ ಹಾಸ್ಟಲ್ ವಾರ್ಡನ್ ಸೇರಿದಂತೆ ಇಬ್ಬರ ವಿರುದ್ಧ ಪೊಲೀಸರು ಪ್ರಕರಣ ದಾಖಿಲಿಸಿಕೊಂಡಿದ್ದು, ವಸತಿ ಶಾಲೆಗೆ ಜಿಲ್ಲಾಧಿಕಾರಿ ತ್ರಿಲೋಕಚಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಆರೋಪಿ ನಾರಾಯಣಪ್ಪ ಪರಾರಿಯಾಗಿದ್ದು, ವಾರ್ಡನ್ ಚಲನಚಿತ್ರ ಚಿಕ್ಕಣ್ಣ ಹಾಗೂ ರಾಧಮ್ಮ ಎಂಬವರನ್ನು ಪೋಕ್ಸೊ ಕಾಯಿದೆಯಡಿ ಪೋಲಿಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
Advertisement