ಕಾನೂನು, ಸುವ್ಯವಸ್ಥೆ ಕಾಪಾಡಲು ಬೆಂಗಳೂರು ಪೊಲೀಸರ ಕಠಿಣ ಕ್ರಮ

ನಗರದಲ್ಲಿ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಯುವುದನ್ನು ತಡೆಯಲು ಕರ್ತವ್ಯದಲ್ಲಿ ಇಲ್ಲದ ಅವಧಿ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 
ಬೆಂಗಳೂರು: ನಗರದಲ್ಲಿ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಯುವುದನ್ನು ತಡೆಯಲು ಕರ್ತವ್ಯದಲ್ಲಿ ಇಲ್ಲದ ಅವಧಿ ಸಂದರ್ಭದಲ್ಲಿ ಕೂಡ ಆರೋಪಿಗಳ ಮೇಲೆ ಶಕ್ತಿ ಪ್ರಯೋಗಿಸುವಂತೆ ನಗರ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಸುನಿಲ್ ಕುಮಾರ್ ತಿಳಿಸಿದ್ದಾರೆ.
ಈ ಕುರಿತು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ ಮಾಹಿತಿ ನೀಡಿದ ಅವರು, ಸಮಾಜ ವಿರೋಧಿ ಚಟುವಟಿಕೆ ನಡೆಸುವರಿಂದ ಕಾನೂನು, ಸುವ್ಯವಸ್ಥೆ ಮತ್ತು ಸಂಚಾರಿ ಪೊಲೀಸರು ತೊಂದರೆಗೀಡಾಗುತ್ತಿದ್ದು ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಆಯುಕ್ತರು ಸೂಚಿಸಿದ್ದಾರೆ.
ಇತ್ತೀಚೆಗೆ ಪೊಲೀಸ್ ಸಬ್ ಇನ್ಸ್ ಪೆಕ್ಟ್ ರ್ ಕರ್ತವ್ಯದಲ್ಲಿದ್ದಾಗ ಆರೋಪಿಯೊಬ್ಬ ಹಲ್ಲೆ ನಡೆಸಿದ್ದು ಮತ್ತು ಆತನ ಸಹಚರರು ಇಬ್ಬರು ಪೊಲೀಸ್ ಅಧಿಕಾರಿ ಮೇಲೆ ಶಸ್ತ್ರಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಬಳಿಕ ಪೊಲೀಸ್ ಆಯುಕ್ತರು ಈ ಸೂಚನೆ ನೀಡಿದ್ದಾರೆ.
ಆರೋಪಿಗಳು ಸಾರ್ವಜನಿಕರಿಗೆ ತೊಂದರೆ ನೀಡುವುದು ಕಂಡುಬಂದರೆ   ಪೊಲೀಸರು ಕರ್ತವ್ಯದಲ್ಲಿ ಇಲ್ಲದ ಸಮಯದಲ್ಲಿ ಕೂಡ ಕ್ರಮ ಕೈಗೊಳ್ಳಲು ಹಿಂಜರಿಯುವುದು ಬೇಡ ಎಂದು ಪೊಲೀಸ್ ಆಯುಕ್ತರು ಸೂಚನೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com