ಈಗ ನಿತ್ಯಾನಂದನ ಸರದಿ?: 10 ದಿನಗಳೊಳಗಾಗಿ ವಿಚಾರಣೆ ನಡೆಸಲಿರುವ 'ಸುಪ್ರೀಂ'

ಸಾಧ್ವಿಗಳ ಮೇಲೆ ಅತ್ಯಾಚಾರ ಎಸಗಿ ಜೈಲು ಪಾಲಾಗಿರುವ ಡೇರಾ ಸಚ್ಚಾ ಸೌದ ಮುಖ್ಯಸ್ಥ ರಾಮ್ ರಹೀಂ ಸಿಂಗ್ ಪ್ರಕರಣದ ಬಳಿಕ, ಇದೀಗ ಅದೇ ರೀತಿಯ ಆರೋಪಗಳನ್ನು ಎದುರಿಸುತ್ತಿರುವ...
ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ
ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ
ಬೆಂಗಳೂರು: ಸಾಧ್ವಿಗಳ ಮೇಲೆ ಅತ್ಯಾಚಾರ ಎಸಗಿ ಜೈಲು ಪಾಲಾಗಿರುವ ಡೇರಾ ಸಚ್ಚಾ ಸೌದ ಮುಖ್ಯಸ್ಥ ರಾಮ್ ರಹೀಂ ಸಿಂಗ್ ಪ್ರಕರಣದ ಬಳಿಕ, ಇದೀಗ ಅದೇ ರೀತಿಯ ಆರೋಪಗಳನ್ನು ಎದುರಿಸುತ್ತಿರುವ ಬಿಡದಿಯ ಧ್ಯಾನಪೀಠ ಆಶ್ರಮದ ನಿತ್ಯಾನಂದ ಪ್ರಕರಣದ ವಿಚಾರಣೆ ತ್ವರಿತಗತಿಯಲ್ಲಿ ನಡೆದು ತೀರ್ಪು ಹೊರಬೀಳಬಹುದೇ ಎಂಬ ಕುತೂಹಲಗಳು ಮೂಡತೊಡಗಿವೆ. 
ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಿತ್ಯಾನಂದನ ವಿರುದ್ದ ದಾಖಲಾಗಿರುವ ಪ್ರಕರಣವನ್ನು 10 ದಿನಗಳೊಳಗಾಗಿ ಸುಪ್ರೀಂಕೋರ್ಟ್ ವಿಚಾರಣೆಗೆ ಕೈಗೆತ್ತಿಕೊಳ್ಳಲು ಮುಂದಾಗಿದೆ. 
ನಿತ್ಯಾನಂದನ ವಿರುದ್ಧ ದಾಖಲಾಗಿರುವಎಲ್ಲಾ ಪ್ರಕರಣಗಳನ್ನು ಮುಂದಿನ ವಾರ ಸುಪ್ರೀಂಕೋರ್ಟ್ ನಲ್ಲಿ ನ್ಯಾಯಮೂರ್ಥಿಗಳಾದ ದೀಪಕ್ ಮಿಶ್ರಾ ಮತ್ತು ಎ.ಎಂ. ಖನ್ವೀಲ್ಕರ್ ಅವನ್ನೊಳಗೊಂಡ ದ್ವಿಸದಸ್ಯ ಪೀಠ ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ ಎಂದು ತಿಳಿದುಬಂದಿದೆ. 
ಪ್ರಸ್ತುತ ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಎದ್ದಿರುವ ಕಾವೇರಿ ನದಿ ನೀರು ಹಂಚಿಕೆ ವಿವಾದ ಕುರಿತಂತೆ ದೀಪಕ್ ಮಿಶ್ರಾ, ಎ.ಎಂ. ಖನ್ವೀಲ್ಕರ್ ಹಾಗೂ ಅಮಿತವರಾಯ್ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ವಿಚಾರಣೆ ನಡೆಸುತ್ತಿದೆ. ಮುಂದಿನ ವಾರ ಕಾವೇರಿ ವಿವಾದದ ವಿಚಾರಣೆ ಅಂತ್ಯಗೊಳ್ಳಲಿದ್ದು. ಬಳಿಕ ದ್ವಿಸದಸ್ಯ ಪೀಠದ ನ್ಯಾಯಮೂರ್ತಿಗಳು ನಿತ್ಯಾನಂದರನ ಮೇಲೆ ದಾಖಲಾಗಿರುವ ಅತ್ಯಾಚಾರ ಪ್ರಕರಣಗಳನ್ನು ವಿಚಾರಣೆ ನಡೆಸಲಿದೆ. 
2010ರ ನವೆಂಬರ್ ತಿಂಗಳಿನಲ್ಲಿ ನಿತ್ಯಾನಂದನ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ತನಿಖೆ ನಡೆಸಿ ಹೈಕೋರ್ಟ್'ಗೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಕೆ ಮಾಡಿದೆ. 
ಬಿಡದಿಯ ಧ್ಯಾನಪೀಠದಲ್ಲಿರುವ ಸ್ವಯಂ ಘೋಷಿತ ದೇವಮಾನ ನಿತ್ಯಾನಂದ ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿದ್ದ ಪ್ರಕರಣ ಇಡೀ ದೇಶದಾದ್ಯಂತ ಭಾರೀ ಸುದ್ದಿಗೆ ಗ್ರಾಸವಾಗಿತ್ತು. ಆಶ್ರಮಕ್ಕೆ ಬರುತ್ತಿದ್ದ ಮಹಿಳಾ ಭಕ್ತರಿಗೆ ಲೈಂಗಿಕ ಕಿರುಕುಳ ನೀಡಿದ್ದಲ್ಲದೇ ಅವರ ಮೇಲೆ ಅತ್ಯಾಚಾರ ನಡೆಸಿದ್ದಾರೆಂದು ಸ್ವತಃ ನಿತ್ಯಾನಂದನ ಕಾರು ಚಾಲಕ ಲೆನಿನ್ ಕುರಪ್ಪನ್ ದೂರು ನೀಡಿದ್ದರು. 
ಇದಕ್ಕೆ ಸಾಕ್ಷಿಯೆಂಬಂತೆ ನಿತ್ಯಾನಂದ ಮಹಿಳೆಯೊಬ್ಬರ ಜೊತೆ ಲೈಂಗಿಕ ಕ್ರಿಯೆ ನಡೆಸುತ್ತಿದ್ದ ದೃಶ್ಯವನ್ನು ಮೊಬೈಲ್ ನಲ್ಲಿ ಸೆರೆ ಹಿಡಿಯಲಾಗಿತ್ತು. ಇದು ಬಹಿರಂಗಗೊಂಡ ಬಳಿಕ ಮಹಿಳೆ ರಾಮನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬಳಿಗ ಸುಧೀರ್ಘ ಕಾನೂನು ಸಮರ ನಡೆದ ಬಳಿಕ ಸುಪ್ರೀಂಕೋರ್ಟ್ ನಿತ್ಯಾನಂದನಿಗೆ ಪುರುಷತ್ವ ಪರೀಕ್ಷೆ ನಡೆಸಲು ಹಾಜರಾಗುವಂತೆ ಆದೇಶಿಸಿತ್ತು. 
ನ್ಯಾಯಾಲಯದ ಆದೇಶದಂತೆ ನಿತ್ಯಾನಂದ ಪುರುಷತ್ವ ಪರೀಕ್ಷೆಗೆ ಹಾಜರಾಗಿದ್ದತು. ವೈದ್ಯರು ನಿತ್ಯಾನಂದನಿಗೆ ಧ್ವನಿ, ರಕ್ತ ಸೇರಿದಂತೆ ವಿವಿಧ ಪರೀಕ್ಷೆಗಳನ್ನು ನಡೆಸಿದ್ದರು. ಮೂಲಗಳ ಪ್ರಕಾರ ನಿತ್ಯಾನಂತ ಮಹಿಳೆಯ ಮೇಲೆ ಅತ್ಯಾಚಾರ ನಡೆಸುವ ಸಾಮರ್ಥ್ಯವನ್ನು ಹೊಂದಿಲ್ಲ ಎಂದು ಹೇಳಲಾಗುತ್ತಿತ್ತು. ನಿತ್ಯಾನಂದ ಒಬ್ಬ ನಪುಂಸಕ ಎಂಬ ಮಾತುಗಳು ಕೂಡ ಕೇಳಿಬರತೊಡಗಿದ್ದವು. 
ಒಂದು ವೇಳೆ ನಿತ್ಯಾನಂದ ಅತ್ಯಾಚಾರ ನಡೆಸಿರುವುದು ಸಾಬೀತಾಗಿದ್ದೇ ಅದರೆ, ಡೇರಾ ಸಚ್ಚಾ ಸೌದದ ಮುಖ್ಯಸ್ಥ ರಾಮ್ ರಹೀಂ ಸಿಂಗ್ ಗೆ ಆದ ಶಿಕ್ಷೆ ಬಿಡದಿಯ ನಿತ್ಯಾನಂದನಿಗೂ ಆಗಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com