ಬೆಂಗಳೂರು: ಇಯರ್ ಬ್ಯಾಕ್ ಪರೀಕ್ಷಾ ವ್ಯವಸ್ಥೆ ವಿರುದ್ಧ ವಿಟಿಯು ವಿದ್ಯಾರ್ಥಿಗಳ ಪ್ರತಿಭಟನೆ

ರಾಜ್ಯಾದ್ಯಂತ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯಕ್ಕೆ ಸೇರಿದ ಕಾಲೇಜುಗಳ ಸಾವಿರಾರು....
ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು
ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು
Updated on
ಬೆಂಗಳೂರು: ರಾಜ್ಯಾದ್ಯಂತ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯಕ್ಕೆ ಸೇರಿದ ಕಾಲೇಜುಗಳ ಸಾವಿರಾರು ವಿದ್ಯಾರ್ಥಿಗಳು ಇಂದು ತರಗತಿಗೆ ಬಹಿಷ್ಕಾರ ಹಾಕಿ ಪ್ರತಿಭಟನೆ ನಡೆಸಿದರು. ವಿಶ್ವವಿದ್ಯಾಲಯದ ಪರಿಷ್ಕೃತ ಪರೀಕ್ಷಾ ವಿಧಾನವನ್ನು ವಿರೋಧಿಸಿ ಅವರು ಪ್ರತಿಭಟನೆ ಕೈಗೊಂಡಿದ್ದರು.
ಆಯ್ಕೆ ಆಧಾರಿತ ಕ್ರೆಡಿಟ್ ಪದ್ಧತಿಯಡಿ ಬಾರದ ವಿದ್ಯಾರ್ಥಿಗಳಿಗೆ ಇಯರ್ ಬ್ಯಾಕ್ ನ್ನು ತೆಗೆದುಹಾಕಬೇಕೆಂದು (choice-based credit system)ವಿದ್ಯಾರ್ಥಿಗಳ ಒತ್ತಾಯವಾಗಿದೆ. ಪೂರಕ ಪರೀಕ್ಷೆಯ ಫಲಿತಾಂಶವನ್ನು ಸಮಯಕ್ಕೆ ಸರಿಯಾಗಿ ಪ್ರಕಟಿಸಬೇಕೆಂದು ಕೂಡ ವಿದ್ಯಾರ್ಥಿಗಳು ಪ್ರತಿಭಟನೆ ವೇಳೆ ಒತ್ತಾಯಿಸಿದ್ದಾರೆ.
2010ರ ಕ್ರಿಟಿಕಲ್ ಇಯರ್ ಸಿಸ್ಟಮ್ ನಡಿಯಲ್ಲಿ ವಿದ್ಯಾರ್ಥಿಗಳು ಮೊದಲ ವರ್ಷದ ಪರೀಕ್ಷೆಯಲ್ಲಿ ತೇರ್ಗಡೆ ಹೊಂದದಿದ್ದರೆ ಮೂರನೇ ವರ್ಷದ ಪದವಿಗೆ ಹೋಗಲು ಸಾಧ್ಯವಿಲ್ಲ. ಈ ಯೋಜನೆಯಡಿ, ಎ ರಡನೇ ವರ್ಷದ ಪರೀಕ್ಷೆಗಳಲ್ಲಿ ತೇರ್ಗಡೆಯಾಗದಿದ್ದರೆ ನಾಲ್ಕನೇ ಅಂದರೆ ಅಂತಿಮ ವರ್ಷದ ಎಂಜಿನಿಯರಿಂಗ್ ಪದವಿಗೆ ಹೋಗಲು ಸಾಧ್ಯವಾಗುವುದಿಲ್ಲ.
ಹೊಸ ಯೋಜನೆಯಡಿ, ಯಾವುದೇ ವಿದ್ಯಾರ್ಥಿ ಅನುತ್ತೀರ್ಣನಾದರೆ ಆಯ್ಕೆ ಆಧಾರಿತ ಕ್ರೆಡಿಟ್ ಸಿಸ್ಟಂ ಯೋಜನೆಯಡಿ ಒತ್ತಾಯಪೂರ್ವಕವಾಗಿ ಬರಬೇಕಾಗುತ್ತದೆ. ಇದರಿಂದ ಅವರಿಗೆ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಲು ಕಷ್ಟವಾಗುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com