ಎಐಸಿಸಿ ಅಧ್ಯಕ್ಷ ಸ್ಥಾನ ಚುನಾವಣೆ: ರಾಹುಲ್ ನಾಮಪತ್ರಕ್ಕೆ ಸಹಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷ ಚುನಾವಣೆಗೆ ಸಲ್ಲಿಸಿದ್ದ ನಾಮಪತ್ರಕ್ಕೆ ಸಹಿ ಮಾಡಿದ್ದಾರೆ.
ಎಐಸಿಸಿ ಅಧ್ಯಕ್ಷ ಸ್ಥಾನ ಚುನಾವಣೆ: ರಾಹುಲ್ ನಾಮಪತ್ರಕ್ಕೆ ಸಹಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಎಐಸಿಸಿ ಅಧ್ಯಕ್ಷ ಸ್ಥಾನ ಚುನಾವಣೆ: ರಾಹುಲ್ ನಾಮಪತ್ರಕ್ಕೆ ಸಹಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷ ಚುನಾವಣೆಗೆ ಸಲ್ಲಿಸಿದ್ದ ನಾಮಪತ್ರಕ್ಕೆ ಸಹಿ ಮಾಡಿದ್ದಾರೆ. ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್, ರಾಹುಲ್ ಗಾಂಧಿ ಸೋಮವಾರ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯಲ್ಲಿದ್ದಾರೆ.
ಸಿದ್ದರಾಮಯ್ಯ ಮತ್ತು ಪರಮೇಶ್ವರ ಅವರಲ್ಲದೆ ಮಲ್ಲಿಕಾರ್ಜುನ ಖರ್ಗೆ ಮತ್ತು ಸಿ.ಕೆ. ಜಾಫರ್ ಶರೀಫ್ ಸೇರಿದಂತೆ 18 ಇತರ ಹಿರಿಯ ಕಾಂಗ್ರೆಸ್ ಮುಖಂಡರು ರಾಹುಲ್ ನಾಮಪತ್ರಕ್ಕೆ ಸಹಿ ಮಾಡಿದ್ದಾರೆ. ಪ್ರತಿ ರಾಜ್ಯದಿಂದ 20 ಕಾಂಗ್ರೆಸ್ ಮುಖಂಡರು ರಾಹುಲ್ ಗಾಂಧಿಯ ಹೆಸರನ್ನು ಪಕ್ಷದ ಉನ್ನತ ಹುದ್ದೆಗೆ ಪ್ರಸ್ತಾಪಿಸುತ್ತಿದ್ದಾರೆ ಎಂದು ಪರಮೇಶ್ವರ್ ಹೇಳಿದರು.
ನಗರದ ಕೆಪಿಸಿಸಿ ಕಚೇರಿಯಲ್ಲಿ ಹಿರಿಯ ಕಾಂಗ್ರೆಸ್ ಮುಖಂಡರ ಸಭೆಯ ಬಳಿಕ ವರದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, ಉತ್ತರ ಪ್ರದೇಶದಲ್ಲಿ ನಡೆದ ನಗರಪಾಲಿಕೆ ಚುನಾವಣೆಗಳಲ್ಲಿ ಪಕ್ಷದ ಕಳಪೆ ಸಾಧನೆಗೆ ಎಲೆಕ್ಟ್ರಾನಿಕ್ ಮತದಾನ ಯಂತ್ರಗಳು (ಇವಿಎಂ) ಕಾರಣ ಎಂದರು. ಉತ್ತರ ಪ್ರದೇಶದ ಚುನಾವಣೆಗಳಲ್ಲಿ ಇವಿಎಂಗಳನ್ನು ತಿರುಚಲಾಗಿತ್ತು. ನಾವು ಈ ಹಿಂದೆ ಸಹ ಹಲವಾರು ಸಂದರ್ಭಗಳಲ್ಲಿ ಇವಿಎಂ ದೋಷದ ಕುರಿತಂತೆ ಕಳವಳವನ್ನು ವ್ಯಕ್ತಪಡಿಸಿದ್ದೇವೆ ಎಂದು ಅವರು ಹೇಳಿದರು.ಗುಜರಾತ್ ಚುನಾವಣೆಗಳಲ್ಲಿ ಇ.ವಿ.ಎಂಗಳನ್ನು ತಿರುಚುವ ಬಗ್ಗೆ ಕಳವಳ ವ್ಯಕ್ತಪಡಿಸಿದ ಪರಮೇಶ್ವರ್ ಅಮೆರಿಕದ ತಜ್ಞರು ಸಹ ಇದೇ ಅಭಿಪ್ರಾಯ ತಾಳಿದ್ದಾರೆ ಎಂದರು
ಸಿಎಂ ಗೆ ಜಾಫರ್ ಶರೀಫ್ ಬೆಂಬಲ
ಈ ಹಿಂದೆ ಪಕ್ಷದಲ್ಲಿ ಹಿರಿಯ ನಾಯಕರನ್ನು ಕಡೆಗಣಿಸಲಾಗುತ್ತಿದೆ ಎಂದು ಸಿದ್ದರಾಮಯ್ಯ ವಿರುದ್ಥೇಳಿಕೆ ನೀಡಿದ್ದ ಜಾಫರ್ ಶರೀಫ್ ಇದೀಗ ಸಿದ್ದರಾಮಯ್ಯನವರ ಪರ ವಹಿಸಿದ್ದಾರೆ. "ಮುಖ್ಯಮಂತ್ರಿಯ ಬಿಡುವಿಲ್ಲದ ವೇಳಾಪಟ್ಟಿಯ ನಡುವೆ  ಅವರು ಪಕ್ಷದ ಕೆಲವು ಮುಖಂಡರನ್ನು ಸಂಪರ್ಕಿಸಲು ಆಗದೇ ಹೋಗಿರಬಹುದು. ಹಾಗೆಂದ ಮಾತ್ರಕ್ಕೆ ಅವರನ್ನು ನಿರ್ಲಕ್ಷಿಸಿದ್ದಾರೆ ಎಂದು ಅರ್ಥವಲ್ಲ," ಶರೀಫ್ ಮಾಧ್ಯಮದವರಿಗೆ ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com