ಬೆಂಗಳೂರು: ಪೋಲೀಸ್ ಫೈರಿಂಗ್, ಮೊಬೈಲ್ ಕಳ್ಳನ ಬಂಧನ

ಬೆಂಗಳೂರಿನಲ್ಲಿ ಇಂದು ಬೆಳಂಬೆಳಗ್ಗೆ ಗುಂಡಿನ ಸದ್ದು ಮೊಳಗಿದೆ. ಪೋಲೀಸರ ಮೇಲೆ ಹಲ್ಲೆಗೆ ಮುಂದಾದ ಮೊಬೈಲ್ ಕಳ್ಳನ ಮೇಲೆ ಗುಂಡು ಹಾರಿಸಲಾಗಿದೆ.
ಬೆಂಗಳೂರು: ಪೋಲೀಸ್ ಫೈರಿಂಗ್, ಮೊಬೈಲ್ ಕಳ್ಳನ ಬಂಧನ
ಬೆಂಗಳೂರು: ಪೋಲೀಸ್ ಫೈರಿಂಗ್, ಮೊಬೈಲ್ ಕಳ್ಳನ ಬಂಧನ
ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಮೊಳಗಿದೆ. ಪೋಲೀಸರ ಮೇಲೆ ಹಲ್ಲೆಗೆ ಮುಂದಾದ ಮೊಬೈಲ್ ಕಳ್ಳನ ಮೇಲೆ ಗುಂಡು ಹಾರಿಸಲಾಗಿದೆ.
ಬೆಂಗಳೂರಿನ  ಆರ್ ಎಂಸಿ ಯಾರ್ಡ್ ಕೈಗಾರಿಕಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು ಮೊಬೈಲ್ ಕಳ್ಳತನ ಮಾಡಿ ಪರಾರಿಯಾಗಲು ಯತ್ನಿಸಿದ್ದ ಅಶ್ವಥ್ ಎನ್ನುವವನ ಮೇಲೆ ಪೋಲೀಸರು ಗುಂಡು ಹಾರಿಸಿದ್ದಾರೆ. ಆತನ ಬಲಗಾಲಿಗೆ ಗುಂಡು ತಗುಲಿದೆ. ಗಾಯಗೊಂಡಿದ್ದ ಅಶ್ವಥ್ ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಶ್ವಥ್ ನನ್ನು ಪೋಲೀಸರು ಬಂಧಿಸುವ ಪ್ರಯತ್ನದಲ್ಲಿದ್ದಾಗ ಆತ ಅವರ ಮೇಲೆ ಹಲ್ಲೆ ಮಾಡಿದ್ದಾನೆ. ಆಗ ಪೋಲೀಸರು ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಸಿದ್ದಾರೆ. ಆದರೂ ಆತ ಮತ್ತೆ ಹಲ್ಲೆಗೆ ಮುಂದಾದಿದ್ದಾನೆ. ಅದಾಗ ಪೋಲೀಸರು ವಿಧಿ ಇಲ್ಲದೆ ಅವನ ಮೇಲೆ ಫೈರಿಂಗ್ ನಡೆಸಿದ್ದಾರೆ. ಹಲ್ಲೆಯಿಂದ ಗಾಯಗೊಂಡ ಪೋಲೀಸರನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು ಆರ್.ಎಂ.ಸಿ. ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com