ಹೊನ್ನಾವರ: ಕೋಮು ಘರ್ಷಣೆ ನಂತರ ನಾಪತ್ತೆಯಾಗಿದ್ದ ಯುವಕನ ಶವ ಕೆರೆಯಲ್ಲಿ ಪತ್ತೆ

ಕೋಮು ಘರ್ಷಣೆ ಬಳಿಕ ಕಾಣೆಯಾಗಿದ್ದ 21 ವರ್ಷದ ಯುವಕನ ಮೃತದೇಹ ಪತ್ತೆಯಾಗಿದ್ದು ಹೊನ್ನಾವರದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ಕಾರವಾರ: ಕೋಮು ಘರ್ಷಣೆ ಬಳಿಕ ಕಾಣೆಯಾಗಿದ್ದ 21 ವರ್ಷದ ಯುವಕನ ಮೃತದೇಹ ಪತ್ತೆಯಾಗಿದ್ದು ಹೊನ್ನಾವರದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. 
ಹೊನ್ನಾವರದಲ್ಲಿ ಮೂರು ದಿನಗಳ ಹಿಂದೆ ಎರಡು ಕೋಮುಗಳ ನಡುವೆ ಘರ್ಷಣೆ ನಡೆಯುತ್ತಿದ್ದು ಈ ವೇಳೆ ನಾಪತ್ತೆಯಾಗಿದ್ದ ಪರೇಶ್ ಮೆಸ್ತಾ ಎಂಬುವರ ಮೃತದೇಹ ನಗರದ ಶನಿ ದೇವಾಸ್ಥಾನದ ಬಳಿ ಇರುವ ಶೆಟ್ಟಿ ಕೆರೆಯಲ್ಲಿ ಪತ್ತೆಯಾಗಿದೆ. ಕೆರೆಯಲ್ಲಿ ಶವ ತೇಲುತ್ತಿರುವುದನ್ನು ಕಂಡ ಸ್ಥಳೀಯರೊಬ್ಬರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು.
ಕೂಡಲೇ ಘಟನಾ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಶೀಲನೆ ನಡೆಸಿದರು. ನಂತರ ಸದ್ಯ ಪ್ರಕರಣ ಕುರಿತಂತೆ ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದನ್ನು ಈಗಾಗಲೇ ಹೇಳಲು ಸಾಧ್ಯವಿಲ್ಲ. ತನಿಖೆ ನಂತರ ಸಂಪೂರ್ಣ ಮಾಹಿತಿ ನೀಡುವುದಾಗಿ ಪೊಲೀಸರು ತಿಳಿಸಿದ್ದಾರೆ. 
ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಅವರು ಕಾರ್ಯಕ್ರಮ ನಿಮಿತ್ತ ಉಡುಪಿಯಲ್ಲಿ ತಂಗಿದ್ದು ಹೊನ್ನಾವರಕ್ಕೆ ಭೇಟಿ ನೀಡುವುದಾಗಿ ಹೇಳಿದ್ದಾರೆ. ಇನ್ನು ರಾಷ್ಟ್ರೀಯ ಸ್ವಯಂಸೇವಾ ಸಂಘ(ಆರ್ಎಸ್ಎಸ್)ದ ನಾಯಕ ಕಲ್ಲಡ್ಕ ಪ್ರಭಾಕರ ಭಟ್ ಸಹ ಹೊನ್ನಾವರಕ್ಕೆ ಭೇಟಿ ನೀಡಲಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com