ರಾಜ್ಯ

ರಾಯಚೂರಿನಲ್ಲಿ 4 ದಿನಗಳ ಕೃಷಿ ಮೇಳ ಆರಂಭ

ಸಿರಿಧಾನ್ಯಕ್ಕೆ ಒತ್ತು ನೀಡುವ ಉದ್ದೇಶದಿಂದ ರಾಯಚೂರು ಕೃಷಿ ವಿಶ್ವವಿದ್ಯಾಲಯದಲ್ಲಿ ನಿನ್ನೆಯಿಂದ ....

ರಾಯಚೂರಿನಲ್ಲಿ 4 ದಿನಗಳ ಕೃಷಿ ಮೇಳ ಆರಂಭ
ಸಾಂದರ್ಭಿಕ ಚಿತ್ರ
Published On :
ರಾಯಚೂರು: ಸಿರಿಧಾನ್ಯಕ್ಕೆ ಒತ್ತು ನೀಡುವ ಉದ್ದೇಶದಿಂದ ರಾಯಚೂರು ಕೃಷಿ ವಿಶ್ವವಿದ್ಯಾಲಯದಲ್ಲಿ  ನಿನ್ನೆಯಿಂದ ನಾಲ್ಕು ದಿನಗಳ ಕಾಲ ಆಯೋಜಿಸಿರುವ ಕೃಷಿ ಮೇಳಕ್ಕೆ ನವಲಕಲ್ ಮಠದ ಸೋಮನಾಥ ಶಿವಾಚಾರ್ಯ ಸ್ವಾಮೀಜಿ ಚಾಲನೆ ನೀಡಿದರು.
ಸುಮಾರು 200ಕ್ಕೂ ಹೆಚ್ಚು ಮಳಿಗೆಗಳ ಉದ್ಘಾಟನೆಯನ್ನು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ. ಪಿ.ಎಂ.ಸಾಲಿಮಠ ನೆರವೇರಿಸಿದರು.ಈ ವೇಳೆ ಮಾತನಾಡಿದ ಸ್ವಾಮೀಜಿ, ಸಿರಿಧಾನ್ಯ ಸೇವನೆಯ ಬಗ್ಗೆ ಹೆಚ್ಚಿನ ಬೆಳಕು ಚೆಲ್ಲುವ ಅವಶ್ಯಕತೆ ಇದೆ ಎಂದು ಹೇಳಿದರು.
ಕುಲಪತಿ ಡಾ. ಸಾಲಿಮಠ, ಕೃಷಿ ವಿಶ್ವವಿದ್ಯಾಲಯವು ಹೊಸ ಹೊಸ ಸಂಶೋಧನೆಯ ಜತೆಗೆ, ಅತಿವೃಷ್ಟಿ ಮತ್ತು ಅನಾವೃಷ್ಟಿಯ ಸಂದರ್ಭದಲ್ಲಿ ಅನುಸರಿಸಬೇಕಾದ ಮಾಹಿತಿಯನ್ನು ರೈತರಿಗೆ ನೀಡಲು ಸಿದ್ಧವಿದೆ, ಇದರ ಸದುಪಯೋಗವನ್ನು ರೈತಾಪಿವರ್ಗ ಪಡೆದುಕೊಳ್ಳಬೇಕೆಂದು ಮನವಿ ಮಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.