ಇಂದು ಸಂಜೆ 4.30ರ ಸುಮಾರಿಗೆ ರಾಜಗೋಲಾಪನಗರದ ಹೆಗ್ಗನಹಳ್ಳಿ ಮುಖ್ಯರಸ್ತೆಯ ಕಲ್ಯಾಣ ಮಂಟಪದ ಬಳಿ ಗೋವಿಂದೇ ಗೌಡ ಅವರ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದು, ಗಂಭೀರವಾಗಿ ಗಾಯಗೊಂಡ ಅವರನ್ನು ಸುಂಕದಕಟ್ಟೆಯ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.