ಸಿಎಂ ಸಿದ್ದರಾಮಯ್ಯ ಇಂದಿನಿಂದ ರಾಜ್ಯ ಪ್ರವಾಸ

ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿನಿಂದ ಒಂದು ತಿಂಗಳ ಕಾಲ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು...
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿನಿಂದ ಒಂದು ತಿಂಗಳ ಕಾಲ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ಹಲವಾರು ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಲಿದ್ದಾರೆ.
ಉತ್ತರ ಕರ್ನಾಟಕದ ಬಸವಕಲ್ಯಾಣದಿಂದ ಈ ಪ್ರವಾಸ ಆರಂಭವಾಗಲಿದ್ದು, ಪ್ರತಿದಿನ ಒಂದು ಜಿಲ್ಲೆಯಲ್ಲಿ ಮೂರು ಕಡೆ ಸಭೆಗಳನ್ನು ನಡೆಸುವ ಕಾರ್ಯಕ್ರಮವಿದೆ.
ಇದು ಸಂಪೂರ್ಣ ಸರ್ಕಾರಿ ಕಾರ್ಯಕ್ರಮವಾಗಿದ್ದು, ರಾಜಕೀಯದಿಂದ ಹೊರತಾಗಿರುತ್ತದೆ ಎಂದು ಅವರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ಈ ಪ್ರವಾಸದ ಸಂದರ್ಭದಲ್ಲಿ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಿಗೂ ಭೇಟಿ ನೀಡುವ ಉದ್ದೇಶವಿದೆ.
ಬರುವ ಮಾರ್ಚ್ 1 ರಿಂದ ಎಲ್ಲಾ ಮುಖಂಡರು ರಸ್ತೆಯ ಮೂಲಕ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ, ಅದು ಸಂಪೂರ್ಣ ರಾಜಕೀಯ ಉದ್ದೇಶದ್ದಾಗಿರುತ್ತದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com