2021ರ ವೇಳೆಗೆ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ನಾನ್-ಸ್ಟಾಪ್ ಮೆಟ್ರೋ ರೈಲು!

2021ರ ವೇಳೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾನ್-ಸ್ಟಾಪ್ ಮೆಟ್ರೋ ರೈಲು ಸಂಚರಿಸಲಿವೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮದ...
ಮೆಟ್ರೋ ರೈಲು
ಮೆಟ್ರೋ ರೈಲು
ಬೆಂಗಳೂರು: 2021ರ ವೇಳೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾನ್-ಸ್ಟಾಪ್ ಮೆಟ್ರೋ ರೈಲು ಸಂಚರಿಸಲಿವೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮದ ಮುಖ್ಯಸ್ಥ ಮಹೇಂದ್ರ ಜೈನ್ ಹೇಳಿದ್ದಾರೆ. 
ನಮ್ಮ ಮೆಟ್ರೋ ಯೋಜನೆಗೆ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡ ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಮಹೇಂದರ್ ಜೈನ್ ಅವರು ನಿಗಮ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾನ್-ಸ್ಟಾಪ್ ಮೆಟ್ರೋ ರೈಲುಗಳನ್ನು ಓಡಿಸಲು ಮುಂದಾಗಿದ್ದು 2021ರೊಳಗೆ ಈ ಯೋಜನೆ ಪೂರ್ಣಗೊಳ್ಳಬಹುದು ಎಂದು ಹೇಳಿದ್ದಾರೆ. 
ನಾಗವಾರದಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದವರೆಗಿನ ಮೆಟ್ರೋ ರೈಲು ಯೋಜನೆ ಪ್ರಸ್ತಾಪಕ್ಕೆ ರಾಜ್ಯ ಸಚಿವ ಸಂಪುಟ ಸಹ ಹಸಿರುವ ನಿಶಾನೆ ತೋರಿಸಿತ್ತು. ಈ ಯೋಜನೆಗೆ 5,950 ಕೋಟಿ ರುಪಾಯಿ ವೆಚ್ಚವಾಗಲಿದ್ದು ಇದಕ್ಕಾಗಿ ರಾಜ್ಯ ಸರ್ಕಾರ 1,250 ಕೋಟಿ ರುಪಾಯಿ. ಕೇಂದ್ರ ಸರ್ಕಾರದಿಂದ 500 ಕೋಟಿ ರುಪಾಯಿ ಮತ್ತು ಸಾಲದ ರೂಪದಲ್ಲಿ 3,200 ಕೋಟಿ ರುಪಾಯಿ ಪಡೆದು ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತದೆ. 
29.67 ಕಿಮೀ ಉದ್ದದ ವ್ಯಾಪ್ತಿಯಲ್ಲಿ 6 ನಿಲ್ದಾಣಗಳು ನಿರ್ಮಾಣವಾಗಲಿವೆ. ಆರ್.ಕೆ ನಗರ, ಜಕ್ಕೂರು, ಹೆಗ್ಡೆ ನಗರ ಮೂಲಕ ಸಂಪರ್ಕ ದೊರೆಯಲಿದ್ದು, 2021ರ ವೇಳೆಗೆ ಯೋಜನೆಯನ್ನು ಪೂರ್ಣಗೊಳಿಸಲಾಗುತ್ತದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com