ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಬುಧವಾರ ಪ್ರಕಟಿಸಿದೆ.
ಕಲಾ, ವಾಣಿಜ್ಯ, ವಿಜ್ಞಾನ ವಿಭಾಗದ ಪರೀಕ್ಷೆಗಳು ಮಾರ್ಚ್​ 1ರಿಂದ ಪ್ರಾರಂಭವಾಗಿ 17ಕ್ಕೆ ಮುಕ್ತಾಯವಾಗಲಿವೆ. 
ವೇಳಾಪಟ್ಟಿಯಂತೆ ಮಾರ್ಚ್ 1ರಂದು ಅರ್ಥಶಾಸ್ತ್ರ, ಭೌತಶಾಸ್ತ್ರ, ಮಾರ್ಚ್ 2ಕ್ಕೆ ಮಾಹಿತಿ ತಂತ್ರಜ್ಞಾನ, ರೀಟೇಲ್‌, ಆಟೋಮೊಬೈಲ್‌, ಹೆಲ್ತ್‌ ಕೇರ್‌, ಬ್ಯೂಟಿ ಮತ್ತು ವೆಲ್‌ನೆಸ್‌, ಮಾರ್ಚ್ 3ರಂದು ಮನಃಶಾಸ್ತ್ರ, ಎಲೆಕ್ಟ್ರಾನಿಕ್ಸ್‌, ಗಣಕ ವಿಜ್ಞಾನ, ಮಾರ್ಚ್ 5ಕ್ಕೆ ವ್ಯವಹಾರ ಅಧ್ಯಯನ, ಜೀವಶಾಸ್ತ್ರ, ಮಾ.6 -ಉರ್ದು, ಸಂಸ್ಕೃತ, ಮಾ.7 -ರಾಜ್ಯಶಾಸ್ತ್ರ, ಭೂಗರ್ಭಶಾಸ್ತ್ರ, ಮಾ.8- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ರಸಾಯನಶಾಸ್ತ್ರ, ಮಾ.9- ತರ್ಕಶಾಸ್ತ್ರ, ಶಿಕ್ಷಣ, ಗೃಹ ವಿಜ್ಞಾನ, ಮಾ.10- ಇತಿಹಾಸ, ಸಂಖ್ಯಾಶಾಸ್ತ್ರ, ಮಾ.11- ಭಾನುವಾರ ರಜೆ, ಮಾ.12 -ಸಮಾಜಶಾಸ್ತ್ರ, ಗಣಿತ, ಬೇಸಿಕ್‌ ಮ್ಯಾಥ್ಸ್, ಮಾ.13 -ಭೂಗೋಳಶಾಸ್ತ್ರ, ಕರ್ನಾಟಕ ಸಂಗೀತ, ಹಿಂದೂಸ್ಥಾನಿ ಸಂಗೀತ, ಮಾ.14 -ಕನ್ನಡ, ಮಾ.15- ಹಿಂದಿ, ಮಾ.16 -ತಮಿಳು, ತೆಲುಗು, ಮಲಯಾಳಂ, ಮರಾಠಿ, ಅರೇಬಿಕ್‌ ಮತ್ತು ಪ್ರಂಚ್‌, ಮಾ.17- ಇಂಗ್ಲಿಷ್‌ ಪರೀಕ್ಷೆ ನಡೆಯಲಿದೆ.
ಎಲ್ಲಾ ಪರೀಕ್ಷೆಗಳು ಬೆಳಿಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೆ ನಡೆಯಲಿವೆ ಎಂದು ಕರ್ನಾಟಕ ಪರೀಕ್ಷಾ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com