ಬೆಂಗಳೂರು: ತಮ್ಮ ಸಹೋದ್ಯೋಗಿ ಪತ್ರಕರ್ತನ ಹತ್ಯೆಗೆ ಸುಪಾರಿ ನೀಡಿದ ಆರೋಪ ಎದುರಿಸುತ್ತಿರುವ ಹಿರಿಯ ಪತ್ರಕರ್ತ ಹಾಗೂ ಹಾಯ್ ಬೆಂಗಳೂರು ಸಂಪಾದಕ ರವಿ ಬೆಳಗೆರೆ ಅವರು ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದು, ಅವರನ್ನು ಗುರುವಾರ ಜಯದೇಶ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ(ಐಸಿಯು)ಗೆ ದಾಖಲಿಸಲಾಗಿದೆ.
ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಅವರ ಹತ್ಯೆಗೆ ಸುಪಾರಿ ನೀಡಿದ ಆರೋಪದ ಮೇಲೆ ಕಳೆದ ಶನಿವಾರ ಸಿಸಿಬಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ರವಿ ಬೆಳಗೆರೆ ಅವರಿಗೆ ನಿನ್ನೆ ಸೆಷನ್ಸ್ ಕೋರ್ಟ್ ಅನಾರೋಗ್ಯದ ಹಿನ್ನೆಲೆಯಲ್ಲಿ ಮಧ್ಯಂತರ ಜಾಮೀನು ನೀಡಿದೆ.
ಜಾಮೀನಿನ ಮೇಲೆ ಬಿಡುಗಡೆಯಾಗಿರುವ ರವಿ ಬೆಳಗೆರೆ ಅವರನ್ನು ಅವರ ಕುಟುಂಬ ಸದಸ್ಯರು ಇಂದು ಅವರನ್ನು ಜಯದೇವ ಆಸ್ಪತ್ರೆಯ ಐಸಿಯು ದಾಖಲಿಸಿದ್ದಾರೆ.