ಎಸ್ಎಸ್ ಎಲ್ ಸಿ ಪರೀಕ್ಷೆಗೆ ಆಧಾರ್ ಸಂಖ್ಯೆ ಕಡ್ಡಾಯವಲ್ಲ: ಹೈಕೋರ್ಟ್

ಹತ್ತನೇ ತರಗತಿ ಪರೀಕ್ಷೆ ಬರೆಯಲು ಆಧಾರ್ ಸಂಖ್ಯೆ ಕಡ್ಡಾಯವಲ್ಲ ಎಂದು ಹೈಕೋರ್ಟ್ ಆದೇಶ ನೀಡಿದ ಹಿನ್ನೆಲೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು: ಹತ್ತನೇ ತರಗತಿ ಪರೀಕ್ಷೆ ಬರೆಯಲು ಆಧಾರ್ ಸಂಖ್ಯೆ ಕಡ್ಡಾಯವಲ್ಲ ಎಂದು ಹೈಕೋರ್ಟ್ ಆದೇಶ ನೀಡಿದ ಹಿನ್ನೆಲೆಯಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಗೆ ಆಧಾರ್ ಸಂಖ್ಯೆ ಕಡ್ಡಾಯ ಎಂಬ ಷರತ್ತನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ತೆಗೆದುಹಾಕಿದೆ.
ಮುಂದಿನ ವರ್ಷ ಏಪ್ರಿಲ್ ನಲ್ಲಿ ನಡೆಯುವ ಎಸ್ಎಸ್ಎಲ್ ಸಿ ಪರೀಕ್ಷೆಗೆ ಆನ್ ಲೈನ್ ಅರ್ಜಿ ಸಲ್ಲಿಸುವಾಗ ಆಧಾರ್ ಸಂಖ್ಯೆಯನ್ನು ಕೂಡ ನೀಡುವಂತೆ ರಾಜ್ಯ ಪ್ರೌಢ ಶಿಕ್ಷಣ ಇಲಾಖೆ ಕಡ್ಡಾಯ ಮಾಡಿತ್ತು. ಇದನ್ನು ವಿರೋಧಿಸಿ ಕೆಲವು ವಿದ್ಯಾರ್ಥಿಗಳು ಕೋರ್ಟ್ ಮೊರೆ ಹೋಗಿದ್ದರು. ಇದೀಗ ಹೈಕೋರ್ಟ್ ವಿದ್ಯಾರ್ಥಿಗಳ ಪರವಾಗಿ ತೀರ್ಪು ನೀಡಿದೆ. 
ಈ ಬಗ್ಗೆ ಪ್ರೌಢ ಶಿಕ್ಷಣ ಮಂಡಳಿಯನ್ನು ಸಂಪರ್ಕಿಸಿದಾಗ, ಅಧಿಕಾರಿಗಳು ಸುದ್ದಿಯನ್ನು ಖಚಿತಪಡಿಸಿದ್ದಾರೆ. ಎಸ್ಎಸ್ ಎಲ್ ಸಿ ಪರೀಕ್ಷೆ ಬರೆಯಲು ಪ್ರವೇಶ ಪತ್ರಕ್ಕೆ ಆಧಾರ್ ಸಂಖ್ಯೆ ಕಡ್ಡಾಯವಲ್ಲ ಎಂದು ತಿಳಿಸಿದ್ದಾರೆ.
ಎಸ್ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆ ಮುಂದಿನ ವರ್ಷ ಮಾರ್ಚ್ 23ರಿಂದ ಏಪ್ರಿಲ್ 6ರವರೆಗೆ ನಡೆಯಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com