ಆವಾಸ್ ಯೋಜನೆಯಡಿ ಮನೆ ನಿರ್ಮಾಣಕ್ಕೆ ಕೇಂದ್ರದ ಅನುಮೋದನೆ: ಸಚಿವ ಹರದೀಪ್ ಸಿಂಗ್ ಪುರಿ

ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ರಾಜ್ಯದಲ್ಲಿ 8 ಸಾವಿರದ 797 ಕೋಟಿ ರೂಪಾಯಿ ವೆಚ್ಚದಲ್ಲಿ 1 ಲಕ್ಷದ 95 ಸಾವಿರದ .....
ಹರದೀಪ್ ಸಿಂಗ್ ಪುರಿ
ಹರದೀಪ್ ಸಿಂಗ್ ಪುರಿ
ಬೆಂಗಳೂರು: ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ರಾಜ್ಯದಲ್ಲಿ 8 ಸಾವಿರದ 797 ಕೋಟಿ ರೂಪಾಯಿ ವೆಚ್ಚದಲ್ಲಿ 1 ಲಕ್ಷದ 95 ಸಾವಿರದ 349 ಮನೆ ನಿರ್ಮಿಸಲು ಕೇಂದ್ರ ಸರಕಾರ ಅನುಮೋದನೆ ನೀಡಿದೆ ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಖಾತೆ ಸಹಾಯಕ ಸಚಿವ ಹರದೀಪ್ ಸಿಂಗ್ ಪುರಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ನಿನ್ನೆ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಸ್ವಂತ ಸೂರು ಇಲ್ಲದ ಬಡವರಿಗೆ ಮನೆ ನಿರ್ಮಿಸಲು ರಾಜ್ಯ ಸರಕಾರ ಪ್ರಸ್ತಾವನೆ ಕಳಿಸಿದರೆ ಕೇಂದ್ರ ಸರ್ಕಾರ ಅದನ್ನು ಪುರಸ್ಕರಿಸಲಿದೆ ಎಂದು ಹೇಳಿದರು.
`ಅಮೃತ್’ ಯೋಜನೆಗೆ ಸಂಬಂಧಿಸಿದಂತೆ ರಾಜ್ಯದ ಪ್ರಗತಿಗೆ ಸಮಾಧಾನ ವ್ಯಕ್ತಪಡಿಸಿರುವ ಅವರು, ನಗರ ಪ್ರದೇಶಗಳಲ್ಲಿ ಹಸಿರು ವಲಯ ಹೆಚ್ಚಿಸಿ ಮಾಲಿನ್ಯ ನಿಯಂತ್ರಿಸಬೇಕು ಎಂದು ಸಲಹೆ ನೀಡಿದರು.
ರಾಜ್ಯದಲ್ಲಿ 27 ನಗರಗಳಲ್ಲಿ ಅಮೃತ್ ಯೋಜನೆ ಜಾರಿಯಲ್ಲಿದ್ದು, ಇದಕ್ಕಾಗಿ ಕೇಂದ್ರ ಸರಕಾರ 4 ಸಾವಿರದ 953 ಕೋಟಿ ರೂಪಾಯಿ ಮೌಲ್ಯದ ಯೋಜನೆಗೆ ಅನುಮತಿ ನೀಡಿದೆ. ಜೊತೆಗೆ, 3 ಲಕ್ಷದ 64 ಸಾವಿರ ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲು ಕೇಂದ್ರ ಸರ್ಕಾರ 61 ಕೋಟಿ ರೂಪಾಯಿ ಒದಗಿಸಿದೆ ಎಂದು ಪುರಿ ತಿಳಿಸಿದರು.
ವಾಣಿಜ್ಯ ಮತ್ತು ವಸತಿ ಸೌಕರ್ಯಕ್ಕಾಗಿ 2030ರ ವೇಳೆಗೆ 700ರಿಂದ 900 ದಶಲಕ್ಷ ಚದರ ಮೀಟರ್‍ನಷ್ಟು ಸ್ಥಳಾವಕಾಶ ಒದಗಿಸಬೇಕಾಗಿದೆ; ಇದರ ಜೊತೆಗೆ, ದೇಶದ ರಿಯಲ್ ಎಸ್ಟೇಟ್ ವಲಯವು ಅಕ್ರಮ ಚಟುವಟಿಕೆಗಳನ್ನು ನಡೆಸದಂತೆ ಅಂಕುಶ ಹಾಕಬೇಕಾದ ಅಗತ್ಯವಿದೆ ಎಂದು ಹೇಳಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com