ಸಾಂದರ್ಭಿಕ ಚಿತ್ರ
ರಾಜ್ಯ
ಮುಂದಿನ ವರ್ಷದಿಂದ ಸಿಇಟಿ ಮೊಬೈಲ್ ನೋಂದಣಿ ಆರಂಭ
ವೈದ್ಯಕೀಯ ಮತ್ತು ಎಂಜಿನಿಯರಿಂಗ್ ವೃತ್ತಿಪರ ಕೋರ್ಸ್‌ಗಳ ಸರ್ಕಾರಿ ಕೋಟದ ಸೀಟುಗಳಿಗೆ ಇನ್ನು...
ಬೆಂಗಳೂರು : ವೈದ್ಯಕೀಯ ಮತ್ತು ಎಂಜಿನಿಯರಿಂಗ್ ವೃತ್ತಿಪರ ಕೋರ್ಸ್‌ಗಳ ಸರ್ಕಾರಿ ಕೋಟದ ಸೀಟುಗಳಿಗೆ ಇನ್ನು ಮುಂದೆ ವಿದ್ಯಾರ್ಥಿಗಳು ಮೊಬೈಲ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಇಟಿ ವ್ಯವಸ್ಥೆಯನ್ನು ವಿದ್ಯಾರ್ಥಿ ಸ್ನೇಹಿಯಾಗಿಸಲು ಬೇಕಾದ ಸಾಫ್ಟ್ವೇರ್ ತಯಾರಿಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದೆ. ಮುಂದಿನ ವರ್ಷ ಏಪ್ರಿಲ್‌ನಲ್ಲಿ ಸಿಇಟಿ ನಡೆಯಲಿದ್ದು, ಇದಾದ ನಂತರದ ಎಲ್ಲಾ ಪ್ರಕ್ರಿಯೆಯನ್ನ ವಿದ್ಯಾರ್ಥಿಗಳು ಮೊಬೈಲ್ ಮೂಲಕವೇ ಮಾಡಬಹುದಾಗಿದೆ.
ಎಂಜಿನಿಯರಿಂಗ್, ಭಾರತೀಯ ವೈದ್ಯ ಪದ್ಧತಿಯ ಕೋರ್ಸ್‌ಗೆ ಪ್ರತಿ ವರ್ಷ ಸಿಇಟಿ ಫಲಿತಾಂಶದ ನಂತರ ತೇರ್ಗಡೆಯಾದ ವಿದ್ಯಾರ್ಥಿಗಳ ನೋಂದಣಿ, ದಾಖಲೆ ಪರಿಶೀಲನೆ, ಆಪ್ಶನ್ ಎಂಟ್ರಿ, ಎಂಟ್ರಿ ತಿದ್ದುಪಡಿ, ಸೀಟು ಹಂಚಿಕೆ, ಶುಲ್ಕ ಪಾವತಿ ಇತ್ಯಾದಿ ಪ್ರಕ್ರಿಯೆ ನಡೆಯುತ್ತದೆ. ಶುಲ್ಕಪಾವತಿಸಿದ ವಿದ್ಯಾರ್ಥಿಗಳು ಆಯಾ ಕಾಲೇಜಿನಲ್ಲಿ ದಾಖಲಾಗುತ್ತಾರೆ.
2014ರ ನಂತರ ಸಿಇಟಿ ವ್ಯವಸ್ಥೆಗೆ ಆನ್‌ಲೈನ್ ರೂಪ ನೀಡಲಾಯಿತು. ಆರಂಭದಲ್ಲಿ ಕಾಲೇಜುಗಳ ಮೂಲಕವೇ ನೋಂದಣಿ ಮಾಡಿಸಿಕೊಳ್ಳಲಾಗುತಿತ್ತು. ನಂತರ ವಿದ್ಯಾರ್ಥಿಗಳಿಗೆ ನೋಂದಣಿ ಮಾಡಲು ಅವಕಾಶ ನೀಡಲಾಗಿತ್ತು. ನಗರದ ಪ್ರದೇಶದ ವಿದ್ಯಾರ್ಥಿಗಳು ಇದನ್ನು ಚೆನ್ನಾಗಿ ಬಳಿಸಿಕೊಂಡಿದ್ದರು.
ಹೀಗಾಗಿಯೇ ಗ್ರಾಮೀಣ ಪ್ರದೇಶದ ಬಹುತೇಕ ವಿದ್ಯಾರ್ಥಿಗಳಿಗೆ ಕೂಡ ಅನುಕೂಲ ಮಾಡಿಕೊಡಲು ಪ್ರಾಧಿಕಾರ ಮುಂದಾಗಿದೆ. ತಮ್ಮ ಎಲ್ಲಾ ದಾಖಲೆಗಳನ್ನು ಸೈಬರ್ ಕೆಫೆಯವರಿಗೆ ನೀಡಿ, ಅವರಿಂದಲೇ ಭರ್ತಿ ಮಾಡಿಸುವುದು, ಕೊನೆಯ ಹಂತದಲ್ಲಿ ವಿದ್ಯಾರ್ಥಿಗಳಿಗೆ ಹತ್ತು ಹಲವು ಅಡ್ಡಿ, ಆತಂಕಗಳು ಬರುವುದನ್ನು ತಪ್ಪಿಸಲು ಮುಂದಿನ ವರ್ಷದಿಂದ ಸಿಇಟಿ ವ್ಯವಸ್ಥೆಯನ್ನು ಇನ್ನಷ್ಟು ಸರಳೀಕರಿಸಿ, ವಿದ್ಯಾರ್ಥಿ ಸ್ನೇಹಿಯಾಗಿಸಲು ಕ್ರಮ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕ್ರಮ ತೆಗೆದುಕೊಂಡಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ