ಲಿಂಗಾಯತರಿಗೆ ಪ್ರತ್ಯೇಕ ಧರ್ಮ ಸ್ಥಾನಮಾನಕ್ಕೆ ರಾಜ್ಯ ಸರ್ಕಾರ ಶಿಫಾರಸು: ಸಿಎಂ ಸಿದ್ದರಾಮಯ್ಯ

ಪ್ರತ್ಯೇಕ ಧರ್ಮದ ವಿಚಾರದಲ್ಲಿ ವೀರಶೈವರು ಮತ್ತು ಲಿಂಗಾಯಿತರು ಪ್ರತ್ಯೇಕ ಮನವಿಗಳನ್ನು ಕೊಟ್ಟಿದ್ದು, ಇವುಗಳನ್ನು ಮುಂದಿನ ಕ್ರಮಕ್ಕಾಗಿ ಅಲ್ಪಸಂಖ್ಯಾತರ ಆಯೋಗಕ್ಕೆ ...
ಕೊಪ್ಪಳದ ಕುಷ್ಟಗಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಕೊಪ್ಪಳದ ಕುಷ್ಟಗಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Updated on: 
ಕೊಪ್ಪಳ: ಪ್ರತ್ಯೇಕ ಧರ್ಮದ ವಿಚಾರದಲ್ಲಿ ವೀರಶೈವರು ಮತ್ತು ಲಿಂಗಾಯಿತರು ಪ್ರತ್ಯೇಕ ಮನವಿಗಳನ್ನು ಕೊಟ್ಟಿದ್ದು, ಇವುಗಳನ್ನು ಮುಂದಿನ ಕ್ರಮಕ್ಕಾಗಿ ಅಲ್ಪಸಂಖ್ಯಾತರ ಆಯೋಗಕ್ಕೆ ಕಳಿಸಿಕೊಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ತಾವು ಕೈಗೊಂಡಿರುವ `ಅಭಿವೃದ್ಧಿ ಪರ್ವ’ ಯಾತ್ರೆಯ ಅಂಗವಾಗಿ ಕೊಪ್ಪಳದಲ್ಲಿ ನಿನ್ನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಾವು ಯಾವುದೇ ಧರ್ಮವನ್ನು ಒಡೆಯುವ ಕೆಲಸ ಮಾಡುತ್ತಿಲ್ಲ. ಆದರೆ ಲಿಂಗಾಯತರು ಮತ್ತು ವೀರಶೈವರು ಒಟ್ಟಾಗುವ ಸಾಧ್ಯತೆ ಕಡಿಮೆಯಾಗಿರುವುದರಿಂದ ಪ್ರತ್ಯೇಕ ಧರ್ಮಕ್ಕೆ ತಾವು ಇದೀಗ ಒಲವು ತೋರುತ್ತಿರುವುದಾಗಿ ಹೇಳಿದ್ದಾರೆ.
ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನಲ್ಲಿ ಸಾಧನ ಸಂಭ್ರಮ ಯಾತ್ರೆಗೆ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಮೂರು ತಿಂಗಳಲ್ಲಿ ಲಿಂಗಾಯತ ಮತ್ತು ವೀರಶೈವ ಧರ್ಮಗಳನ್ನು ಒಗ್ಗೂಡಿಸುವ ಪ್ರಯತ್ನಕ್ಕೆ ಯಾವುದೇ ಫಲ ಸಿಕ್ಕಿಲ್ಲ. ಈ ನಿಟ್ಟಿನಲ್ಲಿ ಲಿಂಗಾಯತ ಸಮುದಾಯವನ್ನು ಅಲ್ಪಸಂಖ್ಯಾತ ಧರ್ಮವೆಂದು ಗುರುತಿಸಬೇಕೆಂದು ಅಲ್ಪಸಂಖ್ಯಾತ ಆಯೋಗಕ್ಕೆ ಸದ್ಯದಲ್ಲಿಯೇ ರಾಜ್ಯ ಸರ್ಕಾರ ಶಿಫಾರಸು ಮಾಡಲಿದೆ ಎಂದು ತಿಳಿಸಿದರು.
ಹೊನ್ನಾವರದಲ್ಲಿ ನಡೆದ ಯುವಕನೊಬ್ಬನ ಸಾವಿನ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಆ ಯುವಕನ ಕುಟುಂಬ ಸದಸ್ಯರು ಒತ್ತಾಯಿಸುತ್ತಿದ್ದರು. ಅದರಂತೆ, ಈಗ ಸಿಬಿಐಗೆ ವಹಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು. 
ಹೊನ್ನಾವರ ತಾಲ್ಲೂಕಿನ ಮಾಗೊಡಿ ಗ್ರಾಮದಲ್ಲಿ ದುಷ್ಕರ್ಮಿಗಳ ಗುಂಪೊಂದು ಶಾಲಾ ಬಾಲಕಿ ಮೇಲೆ ಹಲ್ಲೆ ನಡೆಸಿದರು ಎಂಬ  ವರದಿ ಹಿನ್ನೆಲೆಯಲ್ಲಿ ಉಂಟಾಗಿದ್ದ ಗಲಭೆ ಕಾರವಾರದಲ್ಲಿ ಇದೀಗ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದೆ. ಬಿಜೆಪಿ ಅನಗತ್ಯವಾಗಿ ಕೋಮು ಗಲಭೆ ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com